ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಂಗ್ರಹ ಚಿತ್ರ
Manjula VN
Updated On : 20 Aug 2023, 1:40 pm

ಲಡಾಕ್: ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಲೇಹ್ ಬಳಿ ನಡೆದ ದುರ್ಘಟನೆಯಲ್ಲಿ ನಾವು ನಮ್ಮ ಭಾರತೀಯ ಸೇನೆಯ ಸಿಬ್ಬಂದಿಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳಲು ನೋವಾಗುತ್ತಿದೆ. ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಮೃತ ಕುಟುಂಬಗಳಿಗೆ ಸಂತಾಪಗಳು ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಡಾಖ್‌ನಲ್ಲಿ ಕಂದಕಕ್ಕೆ ಬಿದ್ದ ಸೇನಾ ವಾಹನ: 8 ಸಿಬ್ಬಂದಿ ಹುತಾತ್ಮ!

Advertisement

Advertisement

ಲೇಹ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನಾ ಸಿಬ್ಬಂದಿಯ ಜೀವ ಕಳೆದುಕೊಂಡಿರುವ ವಿಚಾರ ತಿಳಿದು ತೀವ್ರ ದುಃಖವಾಯಿತು. ಮೃತರ ಕುಟುಂಬಗಳಿಗೆ ಸಂತಾಪವನ್ನು ತಿಳಿಸುತ್ತೇನೆ. ದೇವರು ಅವರಿಗೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಗಾಯಗೊಂಡವರು ಶೀಘ್ರಗತಿಯಲ್ಲಿ  ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement