ರಾಜಾ ಭಯ್ಯಾ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ಉತ್ತರ ಪ್ರದೇಶ: ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾದ ಸೂಪರ್ ಸ್ಟಾರ್ ರಜನಿಕಾಂತ್!

ಉತ್ತರ ಪ್ರದೇಶ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಆಯೋಧ್ಯೆ ಭೇಟಿ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯಾನಾಥ್, ಅಖಿವಲೇಶ್ ಯಾದವ್ ರ ಭೇಟಿ ಬೆನ್ನಲ್ಲೇ ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾಗಿರುವುದು ಎಲ್ಲರ ಹುಬ್ಬೇರಿಸಿದೆ.

ಲಖನೌ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಆಯೋಧ್ಯೆ ಭೇಟಿ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯಾನಾಥ್, ಅಖಿವಲೇಶ್ ಯಾದವ್ ರ ಭೇಟಿ ಬೆನ್ನಲ್ಲೇ ಕೊಲೆ ಆರೋಪಿ ರಾಜಾ ಭಯ್ಯಾ ಭೇಟಿಯಾಗಿರುವುದು ಎಲ್ಲರ ಹುಬ್ಬೇರಿಸಿದೆ.

ಹೌದು.. ಉತ್ತರ ಪ್ರದೇಶದ ಲಖನೌನಲ್ಲಿ ಜನಸತ್ತಾ ದಳದ ನಾಯಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ 'ರಾಜಾ ಭಯ್ಯಾ' ಅವರನ್ನು ರಜನಿಕಾಂತ್ ಭೇಟಿಯಾಗಿದ್ದು, ಸುಮಾರು ಹೊತ್ತಿನ ಚರ್ಚೆ ಬಳಿಕ ಅವರ ಮನೆಯಿಂದ ಹೋಗಿದ್ದಾರೆ ಎಂದು ಹೇಳಲಾಗಿದೆ.

ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ 'ರಾಜಾ ಭಯ್ಯಾ'  ಐಪಿಎಸ್ ಅಧಿಕಾರಿಯ ಕೊಲೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ರೌಡಿ ಶೀಟರ್ ಇತಿಹಾಸ ಹೊಂದಿದ್ದ ರಾಜಕಾರಣಿಯಾಗಿದ್ದಾರೆ.

ಆಗಸ್ಟ್ 19 ರಂದು ರಜನಿಕಾಂತ್ ಲಕ್ನೋಗೆ ಬಂದಿಳಿದಿದ್ದರು. ಲಕ್ನೋದಲ್ಲಿನ ಬಿಜೆಪಿ ನಾಯಕರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸೂಪರ್ ಸ್ಟಾರ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು. ಆಗಸ್ಟ್ 20 ರಂದು ತಲೈವರ್ ರಜನಿಕಾಂತ್ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. 

ಆದರೆ ರಜನಿಕಾಂತ್ ಅವರ ಈ ಭೇಟಿ ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?