ಸಿಬಿಐ ಸಾಂದರ್ಭಿಕ ಚಿತ್ರ 
ದೇಶ

ರಕ್ಷಣಾ ಬೇಹುಗಾರಿಕೆ: ಕೆನಡಾ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

ರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು.

ನವದೆಹಲಿ: ರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು.

2019 ರಲ್ಲಿ ಕೆನಡಾದಲ್ಲಿ ಖಾಯಂ ಪೌರತ್ವ ಪಡೆದಿದ್ದ ಉದ್ಯಮಿ ರಾಹುಲ್ ಗಗ್ಗಲ್ ಅವರನ್ನು ಸೋಮವಾರ ದೆಹಲಿಗೆ ಆಗಮಿಸುತ್ತಿದ್ದಂತೆ ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ವಿಶೇಷ ನ್ಯಾಯಾಲಯವು ರಾಹುಲ್ ಗಗ್ಗಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಿ ಗುಪ್ತಚರ ಸಂಸ್ಥೆಗಳಿಗೆ ರವಾನಿಸಿದ ಆರೋಪದಲ್ಲಿ ಪತ್ರಕರ್ತ ವಿವೇಕ್ ರಘುವಂಶಿ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಆಶಿಶ್ ಪಾಠಕ್ ಅವರನ್ನು ಕಳೆದ ಮೇಲೆ 16 ರಂದು ಸಿಬಿಐ ಬಂಧಿಸಿತ್ತು. 

ಕಳೆದ ತಿಂಗಳು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸಿಬಿಐ ರಘುವಂಶಿ ಮತ್ತು ಪಾಠಕ್ ಅವರನ್ನು ಅಧಿಕೃತ ರಹಸ್ಯ ಕಾಯಿದೆಯ ಉಲ್ಲಂಘನೆ ಮತ್ತು ಸಂಬಂಧಿತ ಅಪರಾಧಗಳಲ್ಲಿ ಆರೋಪಿಗಳೆಂದು ಹೆಸರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel