ಸಚಿನ್ ತೆಂಡೂಲ್ಕರ್ 
ದೇಶ

ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ಸಚಿನ್ ತೆಂಡೂಲ್ಕರ್ ನೇಮಕ

ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಚುನಾವಣಾ ಆಯೋಗ(ಇಸಿ) ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು "ರಾಷ್ಟ್ರೀಯ ಐಕಾನ್" ಎಂದು ಬುಧವಾರ ನೇಮಕ ಮಾಡಿದೆ. 

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಚುನಾವಣಾ ಆಯೋಗ(ಇಸಿ) ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು "ರಾಷ್ಟ್ರೀಯ ಐಕಾನ್" ಎಂದು ಬುಧವಾರ ನೇಮಕ ಮಾಡಿದೆ. 

ಇಂದು ದೆಹಲಿಯಲ್ಲಿ ಈ ಸಂಬಂಧ ತೆಂಡೂಲ್ಕರ್ ಮತ್ತು ಚುನಾವಣಾ ಸಮಿತಿ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು, ತೆಂಡೂಲ್ಕರ್ ಮತದಾರರಲ್ಲಿ ಜಾಗೃತಿ ಮೂಡಿಸಲಿದ್ದಾರೆ.

"ಈ ಸಹಯೋಗವು ಮುಂಬರುವ ಚುನಾವಣೆಗಳಲ್ಲಿ ವಿಶೇಷವಾಗಿ 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ (ಲೋಕಸಭೆಗೆ) ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲಿದೆ" ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣಾ ಆಯೋಗ ಕಳೆದ ವರ್ಷ ನಟ ಪಂಕಜ್ ತ್ರಿಪಾಠಿ ಅವರನ್ನು ರಾಷ್ಟ್ರೀಯ ಐಕಾನ್ ಎಂದು ನೇಮಕ ಮಾಡಿತ್ತು. ಈ ಹಿಂದೆ, 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ, ಎಂಎಸ್ ಧೋನಿ, ಅಮೀರ್ ಖಾನ್ ಮತ್ತು ಮೇರಿ ಕೋಮ್ ಅವರಂತಹ ದಿಗ್ಗಜರನ್ನು ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್‌ಗಳಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ