ಯುಪಿ ಸಿಎಂ ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದು ನಮಸ್ಕರಿಸಿದ ರಜನಿಕಾಂತ್ 
ದೇಶ

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ನಮಸ್ಕರಿಸಿದೆ.. ಏಕೆ ಎಂದರೆ....

'ಸನ್ಯಾಸಿ' ಅಥವಾ 'ಯೋಗಿ'ಯ ಪಾದಗಳಿಗೆ ಆ ವ್ಯಕ್ತಿಯ ವಯಸ್ಸನ್ನು ಲೆಕ್ಕಿಸದೆ ನಮಸ್ಕರಿಸುವುದು ನನ್ನ ಅಭ್ಯಾಸ ಎಂದು ಸೂಪರ್‌ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈ: 'ಸನ್ಯಾಸಿ' ಅಥವಾ 'ಯೋಗಿ'ಯ ಪಾದಗಳಿಗೆ ಆ ವ್ಯಕ್ತಿಯ ವಯಸ್ಸನ್ನು ಲೆಕ್ಕಿಸದೆ ನಮಸ್ಕರಿಸುವುದು ನನ್ನ ಅಭ್ಯಾಸ ಎಂದು ಸೂಪರ್‌ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶ ರಾಜಧಾನಿ ಲಖನೌಗೆ ಭೇಟಿ ನೀಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪಾದಗಳನ್ನು ಮುಟ್ಟಿದ ನಂತರ ಸೋಷಿಯಲ್ ಮೀಡಿಯಾಗಳಲ್ಲಿ ಎದ್ದ ವಿವಾದ ಕುರಿತು ಚೆನ್ನೈನಲ್ಲಿ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. 

ಸನ್ಯಾಸಿಯಾಗಲಿ, ಯೋಗಿಯಾಗಲಿ ನನಗಿಂತ ವಯಸ್ಸಿನಲ್ಲಿ ಕಿರಿಯರಾದರೂ ಅವರ ಕಾಲಿಗೆ ಬೀಳುವುದು ನನ್ನ ಅಭ್ಯಾಸ, ಅದನ್ನೇ ಯೋಗಿ ಆದಿತ್ಯನಾಥ್ ಅವರನ್ನು ಕಂಡಾಗ ಮಾಡಿದ್ದೇನೆ ಎಂದು ಹೇಳಿದರು. 

ರಜನಿಕಾಂತ್ ನಡೆಗೆ ತಮಿಳು ನಾಡಿನಲ್ಲಿ ಸಹ ತೀವ್ರ ವಿವಾದ ಕೇಳಿಬಂತು. 72 ವರ್ಷದ ನಟ ತಮಗಿಂತ ವಯಸ್ಸಿನಲ್ಲಿ ಕಿರಿಯ ಯುಪಿ ಸಿಎಂ ಅವರ ಪಾದಗಳನ್ನು ಸ್ಪರ್ಶಿಸುವುದು ಸರಿಯೇ ಎಂದು ಹಲವರು ಪ್ರಶ್ನಿಸಿದ್ದರು. 

ಇದಕ್ಕೆಲ್ಲಾ ಉತ್ತರಿಸಿರುವ ರಜನಿಕಾಂತ್ ತಮ್ಮ ಇತ್ತೀಚಿನ ಜೈಲರ್ ಚಿತ್ರವನ್ನು ಜನರು ಯಶಸ್ವಿಗೊಳಿಸಿರುವುದಕ್ಕೆ ಧನ್ಯವಾದ ಹೇಳಿದರು. 2024ರ ಲೋಕಸಭೆ ಚುನಾವಣೆ ಕುರಿತ ಪ್ರಶ್ನೆಗೆ, ರಾಜಕೀಯದ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT