ದೇಶ

ಚಂದ್ರಯಾನ-3: ಇತಿಹಾಸ ಸೃಷ್ಟಿಗೆ ಕ್ಷಣಗಣನೆ; ಚಂದ್ರನ ಅಂಗಳದಲ್ಲಿಂದು ತ್ರಿವಿಕ್ರಮನ ಪಾದಸ್ಪರ್ಶ, ಇಡೀ ವಿಶ್ವದ ಕಣ್ಣು ಭಾರತದತ್ತ

Manjula VN

ಬೆಂಗಳೂರು: ನೂರಾ ನಲವತ್ತು ಕೋಟಿ ಭಾರತೀಯರ ಶುಭ ಹಾರೈಕೆ ಹಾಗೂ ಪ್ರಾರ್ಥನೆಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದ್ದು, ಈ ಐತಿಹಾಸಿಕ ಸಂದರ್ಭಕ್ಕೆ ಕ್ಷಣಗಣನೆ ಆರಂಭವಾಗಿದೆ.

 ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಕೈಗೊಂಡಿರುವ ಅತ್ಯಂತ ಮಹತ್ವದ ಸಾಹಸಕ್ಕೆ ಇಡೀ ವಿಶ್ವವೇ ಬೆರಗು ಗಣ್ಣಿನಿಂದ ನೋಡುತ್ತಿದೆ. ಈ ಅದ್ಭುತವನ್ನು ಸಾಧಿಸುವ ಮೂಲಕ ಬಾಹ್ಯಾಕಾಶದಲ್ಲಿ ಸಾಧನೆ ಮಾಡಿದ ಇತರ ರಾಷ್ಟ್ರಗಳಲ್ಲಿ ಭಾರತವೂ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸಿದ್ಧವಾಗಿದೆ. ಏಕೆಂದರೆ ಇದು ಚಂದ್ರನ ದಕ್ಷಿಣ ಧೃವವನ್ನು ತಲುಪಲಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಳ್ಳಲಿದೆ.

ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಾನವನ ಜಾಣ್ಮೆ ಮತ್ತು ನಿರ್ಣಯಕ್ಕೆ ಸಾಕ್ಷಿಯಾಗಿದೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಒಳಗೊಂಡಿರುವ LM, ಚಂದ್ರನ ಭೂಪ್ರದೇಶದಲ್ಲಿ ಅತ್ಯಂತ ಸುರಕ್ಷಿತವಾಗಿ ಹಗುರವಾಗಿ ಚಂದ್ರನ ನೆಲವನ್ನು ಸ್ಪರ್ಶಿಸುವ ಮೂಲಕ ಇತಿಹಾಸ ನಿರ್ಮಿಸಲು ಸಿದ್ಧವಾಗಿದೆ. ಬುಧವಾರ ಸಂಜೆ ಅಂದೆ ಇಂದು ಸರಿಯಾಗಿ ಸಂಜೆ 6:04 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಲ್ಯಾಂಡ್​ ಆಗಲಿದೆ.

ವಿಕ್ರಂ ಸುರಕ್ಷಿತವಾಗಿ ಚಂದಪ್ಪನ ಅಂಗಳವನ್ನ ತಲುಪಿದರೆ ವಿಶ್ವದಲ್ಲಿ ವಿಕ್ರಮ ಸ್ಥಾಪಿಸಿದ ಗರಿಮೆ ಇಸ್ರೋ ಪಾಲಿಗೆ ಒದಗಿ ಬರಲಿದೆ. ಚಂದ್ರಯಾನ-3 ರ ಲ್ಯಾಂಡಿಂಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಲಿದೆ. ಏಕೆಂದರೆ ಇದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್‌ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿ ಗುರುತಿಸಿಕೊಳ್ಳಲಿದೆ. ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಸೇರಲಿದೆ. ಈ ಮೂಲಕ ಭಾರತ ಬಾಹ್ಯಾಕಾಶ ಪರಿಶೋಧನೆಯಲ್ಲಿ ವಿಕ್ರಮ ಸಾಧಿಸಿದ ಶ್ರೇಷ್ಠತೆಗೆ ಒಳಗಾಗಲಿದೆ.

SCROLL FOR NEXT