ಸಾಂದರ್ಭಿಕ ಚಿತ್ರ 
ದೇಶ

ಪತ್ನಿ ಸಾವು ಪ್ರಕರಣ: ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿರುದ್ಧ ದೂರು ದಾಖಲು; ಪೋಷಕರಿಂದ ವರದಕ್ಷಿಣೆ ಕಿರುಕುಳ ಆರೋಪ!

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ್ದಕ್ಕಾಗಿ ಪಾಟ್ನಾ ಸಿವಿಲ್ ನ್ಯಾಯಾಲಯದ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರತೀಕ್ ಶೈಲ್ ವಿರುದ್ಧ ದಾನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಟ್ನಾ: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ್ದಕ್ಕಾಗಿ ಪಾಟ್ನಾ ಸಿವಿಲ್ ನ್ಯಾಯಾಲಯದ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರತೀಕ್ ಶೈಲ್ ವಿರುದ್ಧ ದಾನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮೃತ ಚಾಂದಿನಿ ಚಂದಾ ಒಂದು ದಿನದ ಹಿಂದೆ ರಾಜಾ ಬಜಾರ್ ಪಾರಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಮಗಳನ್ನು ಪತಿ ಮತ್ತು ಆಕೆಯ ಅತ್ತೆ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಮೃತ ಮಹಿಳೆ ಚಾಂದಿನಿ ಚಂದಾ ಅವರು ಪಾಟ್ನಾ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರ ಪತ್ನಿಯಾಗಿದ್ದು, ಆಕೆಯ ಕುಟುಂಬ ಸದಸ್ಯರು ವರದಕ್ಷಿಣೆ ಸಾವು ಎಂದು ಆರೋಪಿಸಿದ್ದಾರೆ. ಹೀಗಾಗಿ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ದಾನಪುರ ಎಸ್‌ಎಚ್‌ಒ ತಿಳಿಸಿದ್ದಾರೆ.

'ಆಗಸ್ಟ್ 14ರಂದು ನನ್ನ ಮಗಳು ಅಸ್ವಸ್ಥಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿತ್ತು. ನಂತರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರದಿದ್ದಾಗ ನಾವು ಅವಳನ್ನು ಪ್ಯಾರಸ್ ಆಸ್ಪತ್ರೆಗೆ ದಾಖಲಿಸಿದ್ದೇವು. ಅಲ್ಲಿ ಆಕೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಳು. ನನ್ನ ಮಗಳಿಗೆ ಆಕೆಯ ಅತ್ತೆಯಂದಿರು ವರದಕ್ಷಿಣೆ ತರುವಂತೆ ಆಗಾಗ್ಗೆ ಚಿತ್ರಹಿಂಸೆ ನೀಡುತ್ತಿದ್ದರು. ಆಕೆಯ ಸಾವಿಗೆ ಅವರೇ ಕಾರಣ ಎಂದು ಮೃತಳ ತಂದೆ ಅಶೋಕ್ ಕುಮಾರ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

2022ರ ಮೇ 11ರಂದು ಚಾಂದಿನಿ ಅವರು ಪ್ರತೀಕ್ ಅವರನ್ನು ವಿವಾಹವಾಗಿದ್ದರು. ಮದುವೆ ವೇಳೆ ಚಾಂದಿನಿಯ ಪೋಷಕರು 22 ಲಕ್ಷ ರೂಪಾಯಿ ನಗದು ಮತ್ತು 18 ಲಕ್ಷ ರೂಪಾಯಿ ಮೌಲ್ಯದ ನಾಲ್ಕು ಚಕ್ರದ ವಾಹನವನ್ನು ವರದಕ್ಷಿಣೆಯಾಗಿ ನೀಡಿದ್ದಾರೆ ಎಂದು ಮಾಧ್ಯಮವೊಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT