ಸಂಗ್ರಹ ಚಿತ್ರ 
ದೇಶ

ಖಾಸಗಿ ಫೋಟೋಗಳು ಸೋರಿಕೆ: ಮನನೊಂದ ಉತ್ತರ ಪ್ರದೇಶದಲ್ಲಿ 17 ವರ್ಷದ ಬಾಲಕಿ ನೇಣಿಗೆ ಶರಣು!

ನೆರೆಹೊರೆಯವರಿಂದ ಸಾಮಾಜಿಕ ಜಾಲತಾಣದಲ್ಲಿ ತನ್ನ ಖಾಸಗಿ ಫೋಟೋಗಳು ಸೋರಿಕೆಯಾದ ನಂತರ 17 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಪೊಲೀಸರು ತಿಳಿಸಿದ್ದಾರೆ.

ಕೌಶಾಂಬಿ(ಉತ್ತರ ಪ್ರದೇಶ): ನೆರೆಹೊರೆಯವರಿಂದ ಸಾಮಾಜಿಕ ಜಾಲತಾಣದಲ್ಲಿ ತನ್ನ ಖಾಸಗಿ ಫೋಟೋಗಳು ಸೋರಿಕೆಯಾದ ನಂತರ 17 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಪೊಲೀಸರು ತಿಳಿಸಿದ್ದಾರೆ. 

ಬಾಲಕಿಯ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಯುವಕನ ವಿರುದ್ಧ ದೂರು ನೀಡಲು ಆಕೆಯ ಕುಟುಂಬ ಸದಸ್ಯರು ಹುಡುಗಿಯ ಮನೆಗೆ ಹೋಗಿದ್ದರು. ಆದರೆ ಅಲ್ಲಿ ಅವರ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮರ್ ಬಹದ್ದೂರ್ ಸಿಂಗ್ ಮಾತನಾಡಿ, ಈ ಪ್ರಕರಣದಲ್ಲಿ ಕುಟುಂಬವು ಈ ಹಿಂದೆ ಪೊಲೀಸರಿಗೆ ದೂರು ನೀಡಿತ್ತು ಎಂದು ಹೇಳಿದ್ದಾರೆ.

ಪ್ರಮುಖ ಆರೋಪಿ ಜೈ ಸಿಂಗ್ ಎಂಬಾತ ಸಹ ಬಾಲಕಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈ ಸಿಂಗ್ ಕುಟುಂಬದ ವಿರುದ್ಧ ಬಾಲಕಿಯ ಕುಟುಂಬದವರು ಪ್ರತಿಭಟಿಸಿದಾಗ ಅವರನ್ನು ನಿಂದಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಕ್ಷನ್ 147 (ಗಲಭೆ), 354 (ಸಿ) (ಕದ್ದಾಲಿಕೆ), 306 (ಆತ್ಮಹತ್ಯೆಗೆ ಪ್ರಚೋದನೆ), 504 (ಶಾಂತಿ ಕದಡುವುದು), 506 (ಅಪರಾಧ ಬೆದರಿಕೆ), 509 (ಮಹಿಳೆಯರ ನಮ್ರತೆಗೆ ಅವಮಾನ) ಅಡಿಯಲ್ಲಿ ಆರು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ POCSO ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ.
 
ಪೊಲೀಸರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆದರೆ ಆರೋಪಿಯನ್ನು ಇನ್ನೂ ಸಹ ಬಂಧಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT