ದೇಶ

ದೆಹಲಿ ಜಿ20 ಶೃಂಗಸಭೆ: ರಷ್ಯಾ ಅಧ್ಯಕ್ಷ ಪುಟಿನ್ ಗೈರು ಸಾಧ್ಯತೆ

Srinivasamurthy VN

ನವದೆಹಲಿ: ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೈರಾಗುವ ಸಾಧ್ಯತೆ ಇದೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದಲ್ಲಿ G20 ಶೃಂಗಸಭೆಯಲ್ಲಿ ವೈಯಕ್ತಿಕವಾಗಿ ಪಾಲ್ಗೊಳ್ಳುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಕ್ರೆಮ್ಲಿನ್  ಹೇಳಿಕೆ ಉಲ್ಲೇಖಿಸಿ ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. 

ಶೃಂಗಸಭೆಯು ಸೆಪ್ಟೆಂಬರ್ 8-10 ರವರೆಗೆ ನಡೆಯಲಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರನ್ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರಂತಹ ವಿಶ್ವ ನಾಯಕರು ಈ ಕಾರ್ಯಕ್ರಮಕ್ಕಾಗಿ ದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ.  ವಿವಿಧ ದೇಶಗಳ ಹೆಚ್ಚಿನ ಅತಿಥಿಗಳು ಸೆಪ್ಟೆಂಬರ್ 8 ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಸಭೆ ಬಳಿಕ ಪ್ರತಿನಿಧಿಗಳು ಸೆಪ್ಟೆಂಬರ್ 10-11 ರಂದು ತಮ್ಮ ದೇಶಗಳಿಗೆ ನಿರ್ಗಮಿಸುತ್ತಾರೆ ಎಂದು ಹೇಳಲಾಗಿದೆ.

ವರದಿಗಳ ಪ್ರಕಾರ, ಐಟಿಸಿ ಮೌರ್ಯ, ತಾಜ್ ಪ್ಯಾಲೇಸ್, ದಿ ಒಬೆರಾಯ್, ದಿ ಲೋಧಿ, ದಿ ಇಂಪೀರಿಯಲ್ ಮತ್ತು ಲ ಮೆರಿಡಿಯನ್‌ನಂತಹ 5-ಸ್ಟಾರ್ ಹೋಟೆಲ್‌ಗಳಲ್ಲಿ ಗಣ್ಯರಿಗೆ ಆತಿಥ್ಯ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
 

SCROLL FOR NEXT