ವಿಶೇಷ ಪೂಜೆ ಮತ್ತು ಪ್ರಾರ್ಥನೆಯಲ್ಲಿ ಭಾಗವಹಿಸಿದ ಕೆಸಿಆರ್ 
ದೇಶ

ತೆಲಂಗಾಣ ಸಚಿವಾಲಯದ ಆವರಣದಲ್ಲಿ ದೇವಸ್ಥಾನ, ಮಸೀದಿ, ಚರ್ಚ್ ಉದ್ಘಾಟನೆ

ತೆಲಂಗಾಣದ ಹೊಸ ಸಚಿವಾಲಯದ ಆವರಣದಲ್ಲಿ ನಿರ್ಮಿಸಲಾದ ದೇವಾಲಯ, ಮಸೀದಿ ಮತ್ತು ಚರ್ಚ್ ಅನ್ನು ಶುಕ್ರವಾರ ಉದ್ಘಾಟಿಸಲಾಯಿತು. 

ಹೈದರಾಬಾದ್: ತೆಲಂಗಾಣದ ಹೊಸ ಸಚಿವಾಲಯದ ಆವರಣದಲ್ಲಿ ನಿರ್ಮಿಸಲಾದ ದೇವಾಲಯ, ಮಸೀದಿ ಮತ್ತು ಚರ್ಚ್ ಅನ್ನು ಶುಕ್ರವಾರ ಉದ್ಘಾಟಿಸಲಾಯಿತು. 

ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮೂರು ಸ್ಥಳಗಳಲ್ಲಿ ನಡೆದ ವಿಶೇಷ ಪೂಜೆ ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಹಲವು ಸಚಿವರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಲೋಕಸಭಾ ಸದಸ್ಯ ಅಸಾದುದ್ದೀನ್ ಓವೈಸಿ, ಅವರ ಕಿರಿಯ ಸಹೋದರ ಮತ್ತು ವಿಧಾನಸಭೆಯಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಅವರು ಮಸೀದಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಮಸೀದಿಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ತೆಲಂಗಾಣದಲ್ಲಿ ಸಹೋದರತ್ವವನ್ನು ಕಾಪಾಡಿಕೊಳ್ಳಲು ಸರ್ಕಾರದ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಹೇಳಿದರು.

ತೆಲಂಗಾಣ ಸೆಕ್ರೆಟರಿಯೇಟ್, ಅದರ ಆವರಣದಲ್ಲಿ ದೇವಾಲಯ, ಚರ್ಚ್ ಮತ್ತು ಮಸೀದಿಯನ್ನು ನಿರ್ಮಿಸಲಾಗಿದೆ. ಇದು ಇಡೀ ದೇಶಕ್ಕೆ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆ ಎಂದು ತೆಲಂಗಾಣ ಸಿಎಂ ಹೇಳಿದ್ದಾರೆ.

ಏಪ್ರಿಲ್ 30 ರಂದು ಮುಖ್ಯಮಂತ್ರಿ ಕೆಸಿಆರ್ ಅವರು ಹೊಸ ಸಚಿವಾಲಯವನ್ನು ಉದ್ಘಾಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT