ಮಹುವಾ ಮೊಯಿತ್ರಾ 
ದೇಶ

ಇಸ್ರೋ ಈಗ ಬಿಜೆಪಿಗೆ 2024ರ ಚುನಾವಣಾ ಪ್ರಚಾರದ ಸಾಧನ: ಟಿಎಂಸಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಚಂದ್ರಯಾನ-3 ಯಶಸ್ಸನ್ನು ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಪ್ರಚಾರದ ಸಾಧನವಾಗಿ ಬಳಸಿಕೊಳ್ಳಲಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ...

ಕೋಲ್ಕತಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಚಂದ್ರಯಾನ-3 ಯಶಸ್ಸನ್ನು ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಪ್ರಚಾರದ ಸಾಧನವಾಗಿ ಬಳಸಿಕೊಳ್ಳಲಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಶನಿವಾರ ಹೇಳಿದ್ದಾರೆ.

"ಇಸ್ರೋ ಈಗ ಬಿಜೆಪಿಯ 2024ರ ಚುನಾವಣೆಯ ಪ್ರಚಾರದ ಸಾಧನವಾಗಿದೆ. ಚುನಾವಣೆಗೂ ಮುನ್ನ ರಾಷ್ಟ್ರೀಯತೆಯ ಉನ್ಮಾದವನ್ನು ಹುಟ್ಟುಹಾಕಲು ಪ್ರತಿ ಕಾರ್ಯಾಚರಣೆಯನ್ನು ಬಿಜೆಪಿ ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತದೆ. ದಶಕಗಳ ಭಾರತೀಯ ವೈಜ್ಞಾನಿಕ ಸಂಶೋಧನೆಗಳನ್ನು ಮೋದಿ ಹೈ ತೋ ಮುಮ್ಕಿನ್ ಹೈ ಮ್ಯಾಜಿಕ್(ಮೋದಿ ಇದ್ದರೆ ಮ್ಯಾಜಿಕ್ ಸಾಧ್ಯ) ಎಂಬ ಪ್ಯಾಕೇಜ್ ಸಿದ್ಧ ಮಾಡಲು 24x7 ಭಕ್ತರು ಮತ್ತು ಟ್ರೋಲ್ ಸೇನೆ ಕೆಲಸ ಮಾಡುತ್ತಿದೆ ಎಂದು ಟಿಎಂಸಿ ಸಂಸದೆ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಭಾರತೀಯರೇ ಜಾಗೃತರಾಗಿ, ನಾನು ದೇಶದ್ರೋಹಿಯಲ್ಲ ಎಂದೂ ಹೇಳಿಕೊಂಡಿದ್ದಾರೆ.

 ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಕಚೇರಿ ಭೇಟಿ, ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಇನ್ನು ಪ್ರಧಾನಿ ಮೋದಿ ಅವರ ಇಸ್ರೋ ಭೇಟಿ ಕುರಿತು ಪ್ರತಿಕ್ರಿಯಿಸಿದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಮೋದಿ ಅವರು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ