ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ 
ದೇಶ

ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 3 ಸಾವು, ಹಲವರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕೋಲ್ಕತ್ತದಿಂದ ಉತ್ತರಕ್ಕೆ 30 ಕಿ.ಮೀ ದೂರದಲ್ಲಿ ದತ್ತಪುಕುರ್ ಪೊಲೀಸ್ ಠಾಣಾ ವ್ಯಾಪ್ತಿಯ ನೀಲ್‌ಗಂಜ್‌ನ ಮೋಶ್‌ಪೋಲ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. 

ಮೇ ತಿಂಗಳಲ್ಲಿ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಇದೇ ರೀತಿಯ ಸ್ಫೋಟ ಸಂಭವಿಸಿ 12 ಜನರು ಸಾವನ್ನಪ್ಪಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್