ಸಾಂದರ್ಭಿಕ ಚಿತ್ರ 
ದೇಶ

ಮುಂಬೈನ ಗ್ಯಾಲಕ್ಸಿ ಹೋಟೆಲ್‌ನಲ್ಲಿ ಭಾರೀ ಅಗ್ನಿ ಅವಘಡ: ಮೂವರು ಸಾವು

ದೇಶದ ಆರ್ಥಿಕ ರಾಜಧಾನಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಗ್ಯಾಲಕ್ಸಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಮುಂಬೈ: ದೇಶದ ಆರ್ಥಿಕ ರಾಜಧಾನಿ ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಗ್ಯಾಲಕ್ಸಿ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 

ಬೆಂಕಿಯಿಂದಾಗಿ ಇಬ್ಬರಿಗೆ ಗಾಯಗಳಾಗಿದ್ದು ಮೂವರು ಸಾವನ್ನಪ್ಪಿದ್ದಾರೆ. ಅಗ್ನಿ ಅವಘಡದ ಕುರಿತು ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಸಾಕಷ್ಟು ಪ್ರಯತ್ನದ ನಂತರ ಬೆಂಕಿಯನ್ನು ನಂದಿಸಿವೆ.

ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದ ಮಾಹಿತಿ ಬಂದ ತಕ್ಷಣ ಹೋಟೆಲ್‌ನಲ್ಲಿ ಕಾಲ್ತುಳಿತ ಉಂಟಾಗಿತ್ತು. ಹೋಟೆಲ್ ಸಿಬ್ಬಂದಿ ತರಾತುರಿಯಲ್ಲಿ ಹೋಟೆಲ್ ಖಾಲಿ ಮಾಡಿದರು. ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿ ಸಾಕಷ್ಟು ಪ್ರಯತ್ನ ನಡೆಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಬೆಂಕಿ ಅವಘಡದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಉತ್ತಮ ಚಿಕಿತ್ಸೆಗಾಗಿ ವಿ.ಎನ್.ದೇಸಾಯಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?