ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ದಲಿತ ಯುವಕನಿಗೆ ಥಳಿತ, ಸಾವು, 8 ಮಂದಿ ಬಂಧನ

ಹಳೆ ದ್ವೇಷದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಯುವಕನೊಬ್ಬನನ್ನು ಜನರ ಗುಂಪೊಂದು ಥಳಿಸಿ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ: ಹಳೆ ದ್ವೇಷದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ಯುವಕನೊಬ್ಬನನ್ನು ಜನರ ಗುಂಪೊಂದು ಥಳಿಸಿ ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಈ ಘಟನೆ ನಡೆದಿದ್ದು,  ಪ್ರತಿಪಕ್ಷ ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷಗಳು ಭಾರತೀಯ ಜನತಾ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಪ್ರಕರಣದಲ್ಲಿ ತ್ವರಿತವಾಗಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ಹೇಳಿದೆ. ಈ ವರ್ಷಾಂತ್ಯದಲ್ಲಿ ಮಧ್ಯ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 

ಮೃತನನ್ನು ನಿತಿನ್ ಅಹಿರ್ವಾರ್ ಅಕಾ ಲಾಲು ಎಂದು ಗುರುತಿಸಲಾಗಿದೆ. ಈತನನ್ನು 18 ರಿಂದ 20 ವರ್ಷದೊಳಗಿನ ಗುಂಪು  ಹೊಡೆದು ಕೊಂದು ಹಾಕಿದೆ. ನಂತರ ಪೊಲೀಸರು ಒಂಬತ್ತು ಮಂದಿ ಪರಿಚಿತರು ಹಾಗೂ ಮೂರ್ನಾಲ್ಕು ಮಂದಿ ಅಪರಿಚಿತರ  ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂಜೀವ್ ಉಯ್ಕೆ ಹೇಳಿದ್ದಾರೆ.

ಸಾಗರ್ ನಲ್ಲಿರುವ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಯುವಕ ಸಾವನ್ನಪ್ಪಿದ್ದಾನೆ, ಅದರ ನಂತರ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ  ಎಂದು ಅವರು ತಿಳಿಸಿದ್ದಾರೆ. 

ಪೊಲೀಸ್ ದಾಖಲೆಗಳ ಪ್ರಕಾರ ಮೃತರು ಏಳು ಸುಲಿಗೆ, ಥಳಿತ ಮತ್ತು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಹಳೆ ದ್ವೇಷದಿಂದ ಈ ಘಟನೆ ನಡೆದಿದ್ದು, ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಆರಂಭದಲ್ಲಿ ಅಂತ್ಯ ಸಂಸ್ಕಾರ ನಡೆಸಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT