ದೇಶ

ಮುಂಬೈ ಸಭೆಯಲ್ಲಿ ಇನ್ನಷ್ಟು ಪ್ರಾದೇಶಿಕ ಪಕ್ಷಗಳು 'INDIA' ಸೇರಬಹುದು: ನಿತೀಶ್ ಕುಮಾರ್

Lingaraj Badiger

ಪಾಟ್ನಾ: ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ಇನ್ನಷ್ಟು ಪ್ರಾದೇಶಿಕ ಪಕ್ಷಗಳು 'INDIA' ಸೇರುವ ಸಾಧ್ಯತೆ ಇದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಈಶಾನ್ಯ ಭಾರತ, ಪೂರ್ವ ರಾಜ್ಯಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ಪಕ್ಷಗಳು ವಿರೋಧ ಪಕ್ಷದ ಮೈತ್ರಿಕೂಟ 'ಇಂಡಿಯಾ' ಸೇರಲು ಆಸಕ್ತಿ ಹೊಂದಿವೆ ಎಂದು ಜೆಡಿಯು ನಾಯಕ ತಿಳಿಸಿದ್ದಾರೆ. ಆದರೆ, ನಿರ್ದಿಷ್ಟವಾಗಿ ಇಂಡಿಯಾ ಸೇರುವ ಪಕ್ಷಗಳ ಹೆಸರು ಹೇಳಿಲ್ಲ. ಇವೆಲ್ಲವೂ ಪ್ರಾದೇಶಿಕ ಪಕ್ಷಗಳಾಗಿದ್ದು, ಕೇಂದ್ರದ ಬಿಜೆಪಿ ಸರ್ಕಾರವನ್ನು ವಿರೋಧಿಸುತ್ತಿವೆ ಎಂದಿದ್ದಾರೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳು ಸಭೆಯಲ್ಲಿ, ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ಹೆಸರು ಘೋಷಿಸಲಾಗಿತ್ತು.

ಮುಂಬೈಯಲ್ಲಿ ನಡೆಯುವ ಪ್ರತಿಪಕ್ಷಗಳ ಸಭೆ ನಿರ್ಣಾಯಕವೆಂದು ಪರಿಗಣಿಸಲಾಗಿದ್ದು, ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕರ ನೇಮಕ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆಯ ಕಾರ್ಯತಂತ್ರವನ್ನು ರೂಪಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

SCROLL FOR NEXT