ತಮಿಳುನಾಡು: ಊಟಿಯ ಪ್ರಸಿದ್ಧ ಚಾಕೊಲೇಟ್ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ- ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮಿಳುನಾಡಿನ ಊಟಿಯ ಪ್ರಸಿದ್ಧ ಚಾಕೊಲೇಟ್ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದರು. ಇದು 70 ಮಂದಿ ಮಹಿಳೆಯರ ತಂಡವೇ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಅಲ್ಲಿನ ಮಹಿಳೆಯರೊಂದಿಗೆ ಸಂವಾದ ನಡೆಸಿದರು.
ಊಟಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮಿಳುನಾಡಿನ ಊಟಿಯ ಪ್ರಸಿದ್ಧ ಚಾಕೊಲೇಟ್ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದರು. ಇದು 70 ಮಂದಿ ಮಹಿಳೆಯರ ತಂಡವೇ ನಡೆಸುತ್ತಿರುವ ಕಾರ್ಖಾನೆಯಾಗಿದ್ದು, ಅಲ್ಲಿನ ಮಹಿಳೆಯರೊಂದಿಗೆ ಸಂವಾದ ನಡೆಸಿದರು.
ಈ ಕುರಿತ ವಿಡಿಯೋವೊಂದನ್ನು ರಾಹುಲ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮೋಡಿಸ್ ಚಾಕೊಲೇಟ್ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಕ್ಕೆ ದೊಡ್ಡ ಸಾಕ್ಷಿಯಾಗಿದೆ ಎಂದಿದ್ದಾರೆ.
ಏಳು ನಿಮಿಷಗಳ ವಿಡಿಯೋದಲ್ಲಿ ರಾಹುಲ್ ಕೂಡಾ ಬೇಕರ್ ಆಗಿ ಬದಲಾಗಿದ್ದು, ಮಹಿಳಾ ಕಾರ್ಮಿಕರೊಂದಿಗೆ ಚರ್ಚಿಸುತ್ತಾ ತಮಿಳು ಕಲಿಯಲು ಪ್ರಯತ್ನಿಸಿದ್ದಾರೆ. ಮಹಿಳಾ ಕಾರ್ಮಿಕರಿಂದ ಮೋಡಿಸ್ ಚಾಕೊಲೇಟ್ ತಯಾರಿಸುವ ಬಗ್ಗೆ ಮಾಹಿತಿ ಪಡೆದಿದ್ದಾರೆ.
“ಈ ಸಣ್ಣ ಉದ್ಯಮದ ಹಿಂದಿರುವ ದಂಪತಿಗಳಾದ ಮುರಳೀಧರ್ ರಾವ್ ಮತ್ತು ಸ್ವಾತಿ ಅವರ ಉದ್ಯಮಶೀಲತಾ ಮನೋಭಾವವು ಸ್ಪೂರ್ತಿದಾಯಕವಾಗಿದೆ. ಅವರ ಜೊತೆಯಲ್ಲಿ ಕೆಲಸ ಮಾಡುವ ಎಲ್ಲಾ ಮಹಿಳಾ ತಂಡವೂ ಅಷ್ಟೇ ಗಮನಾರ್ಹವಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಕೂಡಾ ಈ ವಿಡಿಯೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.