ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಣಿಪುರ: ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ ನಾಲ್ವರು ಭಯೋತ್ಪಾದಕರ ಬಂಧನ

ಪ್ರತ್ಯೇಕ ಕಾರ್ಯಾಚರಣೆಯಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
Ramyashree GN
Updated On : 29 Aug 2023, 3:11 pm

ಇಂಫಾಲ: ಪ್ರತ್ಯೇಕ ಕಾರ್ಯಾಚರಣೆಯಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಎನ್ಎಸ್‌ಸಿಎನ್ (ಐಎಂ) ಮತ್ತು ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ನ ತಲಾ ಒಬ್ಬ ದಂಗೆಕೋರರನ್ನು ಮತ್ತು ಇಂಫಾಲ್ ಪೂರ್ವ ಮತ್ತು ಬಿಷ್ಣುಪುರ್ ಜಿಲ್ಲೆಗಳಿಂದ ಕಾಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿ (ಕೆಸಿಪಿ) (Lamyanba Khuman ಬಣ) ದ ಇಬ್ಬರು ಉಗ್ರರನ್ನು ಪೊಲೀಸ್ ತಂಡಗಳು ಬಂಧಿಸಿವೆ ಎಂದು ಹೇಳಿಕೆ ತಿಳಿಸಿದೆ.

ಕಾರ್ಯಾಚರಣೆ ವೇಳೆ ಆರು ಬಂದೂಕುಗಳು, ಐದು ಕಾಟ್ರಿಡ್ಜ್‌ಗಳು ಮತ್ತು ಎರಡು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಐದು ಕಣಿವೆ ಜಿಲ್ಲೆಗಳ ಫ್ರಿಂಜ್ ಮತ್ತು ದುರ್ಗಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅದು ಹೇಳಿದೆ.

Advertisement

Advertisement

ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ: ವಿಧಾನಸಭೆ ಅಧಿವೇಶನ ಮುಂದೂಡುವಂತೆ ಬುಡಕಟ್ಟು ಸಂಘಟನೆಗಳ ಆಗ್ರಹ

ರಾಷ್ಟ್ರೀಯ ಹೆದ್ದಾರಿ 37 (ಇಂಫಾಲ್-ಸಿಲ್ಚಾರ್ ರಸ್ತೆ) ಉದ್ದಕ್ಕೂ ವಾಹನ ಸಂಚಾರದ ಮೇಲೆ ನಿಗಾ ಇಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಬೆಂಗಾವಲುಗಳನ್ನು ಒದಗಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ವಿವಿಧ ಗುಡ್ಡಗಾಡು ಮತ್ತು ಕಣಿವೆ ಜಿಲ್ಲೆಗಳಲ್ಲಿ ಒಟ್ಟು 129 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ ಮತ್ತು ನಿಯಮ ಉಲ್ಲಂಘನೆಗಾಗಿ 2,027 ಜನರನ್ನು ಬಂಧಿಸಲಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments