ದೇಶ

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಇಮ್ರಾನ್ ಮಸೂದ್ ಉಚ್ಛಾಟಿಸಿದ ಮಾಯಾವತಿ

Lingaraj Badiger

ಲಖನೌ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಎಸ್ ಪಿ ನಾಯಕ ಇಮ್ರಾನ್ ಮಸೂದ್ ಅವರನ್ನು  ಮಂಗಳವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಹಿಂದೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ(ಎಸ್‌ಪಿ)ದಲ್ಲಿದ್ದ ಮಸೂದ್ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಎಸ್‌ಪಿಗೆ ಸೇರ್ಪಡೆಗೊಂಡಿದ್ದರು.

ಈಗ ಮಸೂದ್ ಅವರು ಮತ್ತೆ ಕಾಂಗ್ರೆಸ್‌ ಸೇರುವ ಸಾಧ್ಯತೆಯಿದೆ. ತಮ್ಮ ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರವೇ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಮಸೂದ್ ಅವರು ಇತ್ತೀಚೆಗೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು.

ಮಸೂದ್ ಅವರು ಇತ್ತೀಚೆಗಷ್ಟೇ ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಿಪಡಿಸಿ ಬಿಎಸ್ಪಿ ಮುಖ್ಯಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದರು. 

ಬಿಎಸ್ ಪಿ ಮೂಲಗಳ ಪ್ರಕಾರ, ಮಸೂದ್ ಅವರು ಸ್ವಲ್ಪ ಸಮಯದಿಂದ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಆದಾಗ್ಯೂ, ಅವರು ಪಕ್ಷ ವಿರೋಧಿ ಚಟುವಟಿಕೆ ಮುಂದುವರೆಸಿದ ಹಿನ್ನೆಲೆಯಲ್ಲಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಮಸೂದ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದಾರೆ.

SCROLL FOR NEXT