ದೇಶ

ಗಡಿ ಕ್ಯಾತೆ: ಭಾರತದ ಜಿ–20 ಶೃಂಗಸಭೆಗೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಗೈರು ಸಾಧ್ಯತೆ!

Srinivasamurthy VN

ನವದೆಹಲಿ: ಭಾರತದ ಅರುಣಾಚಲಪ್ರದೇಶ ಮತ್ತು ಅಕ್ಸಾಯ್‌ ಚಿನ್‌ ಪ್ರದೇಶಗಳನ್ನು ತನ್ನ ಗಡಿಯೊಳಗೆ ಹಾಕಿ ನಕ್ಷೆ ಬಿಡುಗಡೆ ಮಾಡಿದ್ದ ಚೀನಾ ಇದೀಗ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ತನ್ನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೈರಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ–20 ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ರಾಯಿಟರ್ಸ್‌ ಸುದ್ದಿಸಂಸ್ಥೆ ವರದಿ ಮಾಡಿದ್ದು, ಬೀಜಿಂಗ್ ಪ್ರತಿನಿಧಿಯಾಗಿ ಲಿ ಕಿಯಾಂಗ್ ಅವರು ಸೆಪ್ಟೆಂಬರ್ 9-10ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಕ್ಸಿ ಜಿನ್‌ಪಿಂಗ್‌ ಭಾಗವಹಿಸುವಿಕೆಗೆ ಸಂಬಂಧಿಸಿ ಭಾರತ ಮತ್ತು ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶೃಂಗಸಭೆ ಸಂದರ್ಭದಲ್ಲಿಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರೊಂದಿಗೆ ಜಿನ್‌ಪಿಂಗ್‌ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ, ಜಿನ್‌ಪಿಂಗ್‌ ಅವರು ಶೃಂಗದಲ್ಲಿ ಭಾಗಿಯಾಗುವುದನ್ನು ಖಚಿತಪಡಿಸುವ ಯಾವುದೆ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರಿಗೆ ಸೋಮವಾರ ಕರೆ ಮಾಡಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಸಭೆಯಲ್ಲಿ ತಾವು ಪಾಲ್ಗೊಳ್ಳದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಕೂಡ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನಲಾಗಿದೆ. 
 

SCROLL FOR NEXT