ಒಡಿಶಾ: ವಿಷಕಾರಿ ಹಣ್ಣು ತಿಂದು 11 ಮಕ್ಕಳು ಅಸ್ವಸ್ಥ
ವಿಷಯುಕ್ತ ಹಣ್ಣು ತಿಂದು 11 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಮಲ್ಕಂಗಾರಿ ಜಿಲ್ಲೆಯ ಜಾರಪಳ್ಳಿ ಪಂಚಾಯಿತಿ ವ್ಯಾಪ್ತಿಯ ತಾಳಿಮೇಟ ಗ್ರಾಮದಲ್ಲಿ ನಡೆದಿದೆ.
ಮಲ್ಕಂಗಿರಿ: ವಿಷಯುಕ್ತ ಹಣ್ಣು ತಿಂದು 11 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಮಲ್ಕಂಗಾರಿ ಜಿಲ್ಲೆಯ ಜಾರಪಳ್ಳಿ ಪಂಚಾಯಿತಿ ವ್ಯಾಪ್ತಿಯ ತಾಳಿಮೇಟ ಗ್ರಾಮದಲ್ಲಿ ನಡೆದಿದೆ.
ಶಾಲೆಯಿಂದ ಮನೆಗೆ ತೆರಳುತತಿದ್ದ ಮಕ್ಕಳು ಗ್ರಾಮದ ಹೊರವಲಯದಲ್ಲಿದ್ದ ಗಿಡವೊಂದರ ವಿಷಯುಕ್ತ ಹಣ್ಣುಗಳನ್ನು ಸೇವನೆ ಮಾಡಿದ್ದಾರೆ. ಹಣ್ಣು ತಿಂದ ಕೆಲವೇ ನಿಮಿಷಗಳಲ್ಲಿ ವಾಂತಿ ಮಾಡಿಕೊಂಡಿದ್ದಾರೆ. ಅಲ್ಲದೆ, ಅತೀವ್ರ ಹೊಟ್ಟೆನೋವು ಕಾಣಿಸಿಕೊಂಡು, ಅಸ್ವಸ್ಥರಾಗಿದ್ದಾರೆ.
ಕೂಡಲೇ ಸ್ಥಳೀಯರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಬಳಿಕ ಇದೀಗ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.