ಘಟನೆಯಲ್ಲಿ ನಜ್ಜುಗುಜ್ಜಾಗಿರುವ ವಾಹನ. 
ದೇಶ

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ನಿಂತಿದ್ದ ಟ್ರಕ್​ಗೆ ವ್ಯಾನ್ ಡಿಕ್ಕಿ, 7 ಮಂದಿ ದುರ್ಮರಣ

ಒಡಿಶಾದ ಕಿಯೋಂಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 8 ಮಂದಿ ಮಂದಿ ಸಾವನ್ನಪ್ಪಿ 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಕಿಯೋಂಜಾರ್ (ಒಡಿಶಾ): ಒಡಿಶಾದ ಕಿಯೋಂಜಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 8 ಮಂದಿ ಮಂದಿ ಸಾವನ್ನಪ್ಪಿ 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ ಮಾ ತಾರಿಣಿ ದೇವಸ್ಥಾನಕ್ಕೆ ವ್ಯಾನ್‌ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಘಾಟಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.

ಆರಂಭದಲ್ಲಿ ಗಾಯಾಳುಗಳನ್ನು ಘಾಟ್‌ಗಾಂವ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ನಂತರ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು. ಈ ಅವಘಡ ಎಷ್ಟು ಭೀಕರವಾಗಿತ್ತೆಂದರೆ ವ್ಯಾನ್ ಹಾರಿ ಹೋಗಿ, ಸಂಪೂರ್ಣ ನಜ್ಜುಗುಜ್ಜಾಗಿದೆ.

ಸಾವನ್ನಪ್ಪಿದವರಲ್ಲಿ ಎರಡು ಕುಟುಂಬಗಳ ಜನರು ಸೇರಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಬಲಿಜೋಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಗಾಯಾಳುಗಳನ್ನು ಆಂಬ್ಯುಲೆನ್ಸ್​ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಬಗ್ಗೆ ಕಿಯೋಂಜಾರ್ ಎಸ್ಪಿ ಕುಸಲ್ಕರ್ ನಿತಿನ್ ದಗುಡು ಮಾತನಾಡಿಗಂಜಾಂ ಜಿಲ್ಲೆಯ ಗ್ರಾಮವೊಂದರಿಂದ ಕಿಯೋಂಜಾರ್ ಜಿಲ್ಲೆಯ ಘಾಟ್‌ಗಾಂವ್ ಪ್ರದೇಶದ ಮಾ ತಾರಿಣಿ ದೇವಸ್ಥಾನಕ್ಕೆ ತೆರಳುತ್ತಿದ್ದ ವ್ಯಾನ್‌ನಲ್ಲಿ 20 ಜನರಿದ್ದರು. ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ವ್ಯಾನ್​ ಡಿಕ್ಕಿ ಹೊಡೆದಿದೆ. ಅಪಘಾತ ಸಂದರ್ಭದಲ್ಲಿ ವ್ಯಾನ್ ವೇಗವಾಗಿ ಚಲಿಸುತ್ತಿತ್ತು. ಮಂಜು ಇದ್ದುದರಿಂದ ಚಾಲಕನಿಗೆ ಟ್ರಕ್ ನಿಂತಿರುವುದು ಕಾಣಿಸದೇ ಇರುವ ಸಾಧ್ಯತೆ ಇದೆ. ಮೃತರ ಕುಟುಂಬಗಳಿಗೆ ಮಾಹಿತಿ ರವಾನಿಸಲಾಗಿದೆ. ಆಯಾ ಕುಟುಂಬಸ್ಥರು ಮತ್ತು ಸಂಬಂಧಿಕರು ಇನ್ನು ಕೆಲ ಹೊತ್ತಲ್ಲಿ ಆಸ್ಪತ್ರೆಗೆ ತಲುಪಲಿದ್ದಾರೆ" ಎಂದು ಹೇಳಿದರು.

ಘಟನೆಯಲ್ಲಿ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಗಂಜಾಮ ಜಿಲ್ಲೆಯ ಪೊಡಮರಿ ಗ್ರಾಮದ ಎರಡು ಕುಟುಂಬಗಳಿಗೆ ಸೇರಿದವರು ಎಂದು ತಿಳಿದುಬಂದಿದೆ. ಈ ಪೈಕಿ ಕೆಲವರು ಬಿಜೆಡಿ ರಾಜ್ಯಸಭಾ ಮಾಜಿ ಸಂಸದೆ ರೇಣುಬಾಲಾ ಪ್ರಧಾನ್ ಅವರ ಸಂಬಂಧಿಕರು ಎಂಬ ಮಾಹಿತಿ ದೊರೆತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್