ಹೊಸ ಸಂಸತ್ತು ಭವನ 
ದೇಶ

ಡಿಸೆಂಬರ್ 4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಇಂದು ಸರ್ವಪಕ್ಷ ಸಭೆ

ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.

ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ. 

ಸಭೆಯಲ್ಲಿ ಕೇಂದ್ರ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಪ್ರಸ್ತುತ, 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ ಉಳಿದಿವೆ ಅವುಗಳಲ್ಲಿ 12 ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮತ್ತು ಏಳು ಮಸೂದೆಗಳು ಪರಿಚಯ, ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿಮಾಡಲಾಗಿದೆ.

ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿರುವ ಅಧಿವೇಶನದ ಮೇಲೆ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಮುಖ ಪ್ರಭಾವ ಬೀರುತ್ತವೆ.ಪಂಚರಾಜ್ಯಗಳ ಚುನಾವಣಾ ಫಲಿತಾಂಶವನ್ನು ಲೋಕಸಭೆ ಚುನಾವಣೆಯ ಸೆಮಿ ಫೈನಲ್ ಎಂದೇ ಕರೆಯಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)