ವಿಧಾನಸಭಾ ಚುನಾವಣಾ ಫಲಿತಾಂಶ 
ದೇಶ

ವಿಧಾನಸಭೆ ಚುನಾವಣಾ ಫಲಿತಾಂಶ: 3 ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್

2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮತ್ತು 1 ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ.

ಹೈದರಾಬಾದ್: 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮತ್ತು 1 ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸ್ಪಷ್ಟ ಬಹುಮತದತ್ತ ಬಿಜೆಪಿ ದಾಪುಗಾಲಿರಿಸಿದ್ದರೆ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಮಧ್ಯ ಪ್ರದೇಶದ ಒಟ್ಟು 230 ಕ್ಷೇತ್ರಗಳ ಪೈಕಿ ಬಿಜೆಪಿ 144 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಕೇವಲ 83 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 116 ಆಗಿದ್ದು ಈಗಾಗಲೇ ಬಿಜೆಪಿ 144 ಸ್ಥಾನಗಳ ಮುನ್ನಡೆಯಲ್ಲಿದ್ದು, ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ.

ರಾಜಸ್ಥಾನದಲ್ಲಿ ಬಿಜೆಪಿ ನಾಗಾಲೋಟ
ಅತ್ತ ರಾಜಸ್ಥಾನದಲ್ಲೂ 199 ಕ್ಷೇತ್ರಗಳ ಪೈಕಿ ಬಿಜೆಪಿ 116 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಕೇವಲ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ 100 ಮ್ಯಾಜಿಕ್ ನಂಬರ್ ಆಗಿದ್ದು, ಹೀಗಾಗಿ ಇಲ್ಲಿಯೂ ಬಿಜೆಪಿ ಅಧಿಕಾರ ರಚನೆಯತ್ತ ಸಾಗಿದೆ.

ಛತ್ತೀಸ್ ಘಡದಲ್ಲಿ ಕಾಂಗ್ರೆಸ್-ಬಿಜೆಪಿ ತೀವ್ರ ಪೈಪೋಟಿ
ಇತ್ತ ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಛತ್ತೀಸ್ ಗಢದ ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 39 ಮತ್ತು ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಇನ್ನೂ ಹಲವು ಸುತ್ತಿನ ಮತ ಎಣಿಕೆ ಬಾಕಿ ಇದ್ದು, ಹೀಗಾಗಿ ಇಲ್ಲಿ ಮತ್ತೆ ಕಾಂಗ್ರೆಸ್ ಬಿಜೆಪಿಗೆ ಪೈಪೋಟಿ ನೀಡುವ ಸಾಧ್ಯತೆ ಇದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ ಲಭಿಸಿರುವ ಟ್ರೆಂಡ್ ಗಳ ಪ್ರಕಾರ ಛತ್ತೀಸ್ ಗಢದಲ್ಲೂ ಬಿಜೆಪಿ ಸರ್ಕಾರ ರಚಿಸುವತ್ತ ದಾಪುಗಾರಿಸಿದ್ದು, ಇಲ್ಲಿ ಸರ್ಕಾರ ರಚನೆಗೆ 46 ಸ್ಥಾನಗಳ ಅಗತ್ಯವಿದೆ. ಆದರೆ ಬಿಜೆಪಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಹೀಗಾಗಿ ಇಲ್ಲಿಯೂ ಬಿಜೆಪಿ ಸರ್ಕಾರ ರಚಿಸುವತ್ತ ದಾಪುಗಾಲಿರಿಸಿದೆ. ಆದರೂ ಇಲ್ಲಿ ಹಲವು ಹಂತಗಳ ಮತ ಎಣಿಕೆ ಕಾರ್ಯ ಬಾಕಿ ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಅವಕಾಶ ಇದೆ ಎಂದು ಹೇಳಲಾಗುತ್ತಿದೆ.

ಕೈ ಹಿಡಿದ ಗ್ಯಾರಂಟಿ; ತೆಲಂಗಾಣ ಕಾಂಗ್ರೆಸ್ ತೆಕ್ಕೆಗೆ
ಇತ್ತ ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು ತೆಲಂಗಾಣದ ಒಟ್ಟು 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಭೂತಪೂರ್ವ ಸಾಧನೆ ಮಾಡಿದೆ. ಆಡಳಿತಾರೂಢ ಬಿಆರ್ಎಸ್ ಕೇವಲ 45 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು ಎಐಎಂಐಎಂ 4 ಮತ್ತು ಬಿಜೆಪಿ 3ರಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅಧಿಕಾರ ರಚನೆಗೆ ಇಲ್ಲಿ 60 ಕ್ಷೇತ್ರಗಳ ಅಗತ್ಯತೆ ಇದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಅಧಿಕಾರ ರಚನೆಯತ್ತ ದಾಪುಗಾಲಿರಿಸಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT