ದೇಶ

ವಿಧಾನಸಭೆ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು 

Ramyashree GN

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶದ 230 ಸ್ಥಾನಗಳಲ್ಲಿ ಬಿಜೆಪಿ 161 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಛತ್ತೀಸಗಢದ 90 ವಿಧಾನಸಭಾ ಸ್ಥಾನಗಳ ಪೈಕಿ 55 ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ರಾಜಸ್ಥಾನದ 199 ಸ್ಥಾನಗಳಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಈ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿದೆ. ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಈ ಟ್ರೆಂಡ್ ಅನ್ನು ಗಮನಿಸಿದರೆ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವುದು ನಿಚ್ಚಳವಾಗಿದೆ.

SCROLL FOR NEXT