ಸಾಂದರ್ಭಿಕ ಚಿತ್ರ 
ದೇಶ

ಬಿಜೆಪಿ 12 ರಾಜ್ಯಗಳಲ್ಲಿ ಸ್ವಂತ ಬಲದಲ್ಲಿ ಅಧಿಕಾರ, 3 ರಾಜ್ಯಗಳಲ್ಲಿ ಕಾಂಗ್ರೆಸ್ ರಾಜ್ಯಭಾರ

ಇತ್ತೀಚೆಗಷ್ಟೇ ಚುನಾವಣೆ ನಡೆದ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿದ್ದು, ಈಗ ಪಕ್ಷವು 12 ರಾಜ್ಯಗಳಲ್ಲಿ ಸ್ವಂತ ಬಲದಲ್ಲಿ ಅಧಿಕಾರ ನಡೆಸಲಿದೆ. ಆದರೆ ಎರಡನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಸೋತ ನಂತರ ಮೂರಕ್ಕೆ ಇಳಿಯಲಿದೆ.

ನವದೆಹಲಿ: ಇತ್ತೀಚೆಗಷ್ಟೇ ಚುನಾವಣೆ ನಡೆದ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿದ್ದು, ಈಗ ಪಕ್ಷವು 12 ರಾಜ್ಯಗಳಲ್ಲಿ ಸ್ವಂತ ಬಲದಲ್ಲಿ ಅಧಿಕಾರ ನಡೆಸಲಿದೆ. ಆದರೆ ಎರಡನೇ ಅತಿದೊಡ್ಡ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಸೋತ ನಂತರ ಮೂರಕ್ಕೆ ಇಳಿಯಲಿದೆ. ದೆಹಲಿ ಮತ್ತು ಪಂಜಾಬ್‌ನಲ್ಲಿ ಸರ್ಕಾರ ಹೊಂದಿರುವ ಆಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷಗಳಲ್ಲಿ ಮೂರನೇ ಸ್ಥಾನದಲ್ಲಿದೆ. 

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಉತ್ತರಾಖಂಡ, ಹರಿಯಾಣ, ಉತ್ತರ ಪ್ರದೇಶ, ಗುಜರಾತ್, ಗೋವಾ, ಅಸ್ಸಾಂ, ತ್ರಿಪುರಾ, ಮಣಿಪುರ, ಅರುಣಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿದೆ.  ಅಲ್ಲದೇ ಮಧ್ಯಪ್ರದೇಶವನ್ನು ಮರಳಿ ಪಡೆಯಲು ಮತ್ತು ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಕಾಂಗ್ರೆಸ್‌ನಿಂದ ಕಸಿದುಕೊಳ್ಳಲು ಸಿದ್ಧವಾಗಿದೆ. ಇಂದು ಮತ ಎಣಿಕೆ ನಡೆಯುತ್ತಿರುವ ರಾಜ್ಯಗಳಲ್ಲದೇ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ.

ಕಾಂಗ್ರೆಸ್ ಈಗ ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಅಧಿಕಾರ ನಡೆಸಲಿದೆ.  ಅಲ್ಲಿ ಅದು ತನ್ನ ಹತ್ತಿರದ ಪ್ರತಿಸ್ಪರ್ಧಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯನ್ನು (ಬಿಆರ್‌ಎಸ್) ಸೋಲಿಸಿ ಗೆಲುವಿನ ಹಾದಿಯಲ್ಲಿದೆ.  ಕಾಂಗ್ರೆಸ್ ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಆಡಳಿತಾರೂಢ ಒಕ್ಕೂಟದ ಭಾಗವಾಗಿದೆ ಮತ್ತು ತಮಿಳುನಾಡಿನಲ್ಲಿ ಡಿಎಂಕೆಯ ಮಿತ್ರಪಕ್ಷವಾಗಿದೆ. ಆದರೆ ಅಲ್ಲಿ ಸರ್ಕಾರದ ಭಾಗವಾಗಿಲ್ಲ. 

 ಇಂದಿನ ಫಲಿತಾಂಶಗಳ ನಂತರ, ಆಮ್ ಆದ್ಮಿ ಪಕ್ಷವು ಪಂಜಾಬ್ ಮತ್ತು ದೆಹಲಿ ಎಂಬ ಎರಡು ರಾಜ್ಯ ಸರ್ಕಾರಗಳೊಂದಿಗೆ ಉತ್ತರ ಭಾರತದಲ್ಲಿ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ ಎಂದು ಎಎಪಿ ನಾಯಕ ಜಾಸ್ಮಿನ್ ಶಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆಯ

 ದೇಶದಲ್ಲಿ ಪ್ರಸ್ತುತ ಆರು ರಾಷ್ಟ್ರೀಯ ಪಕ್ಷಗಳಿವೆ. ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜ ಪಕ್ಷ , CPI(M), NPP ಮತ್ತು AAP. 2024 ರಲ್ಲಿ ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ಸುತ್ತಿನ ವಿಧಾನಸಭೆ ಚುನಾವಣೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಧಾನಸಭೆ ಚುನಾವಣೆಯೂ ಬಾಕಿ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT