ಅಶೋಕ್ ಗೆಹ್ಲೋಟ್ 
ದೇಶ

Rajasthan elections results: ಬಿಜೆಪಿಗೆ ಆರಂಭಿಕ ಮುನ್ನಡೆ, ಮುನ್ನಡೆ ಕಾಯ್ದುಕೊಂಡ ಸಿಎಂ ಅಶೋಕ್ ಗೆಹ್ಲೋಟ್!

199 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ನವೆಂಬರ್ 25 ರಂದು ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ. ಸದ್ಯ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ದಾರ್‌ಪುರ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಜೈಪುರ: 199 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ನವೆಂಬರ್ 25 ರಂದು ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ. ಸದ್ಯ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಚುನಾವಣಾ ಆಯೋಗದ ಅಧಿಕೃತ ಟ್ರೆಂಡ್‌ಗಳ ಪ್ರಕಾರ, ಬಿಜೆಪಿ 117 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಎಪಿ (ಭಾರತೀಯ ಆದಿವಾಸಿ ಪಕ್ಷ) ಅಭ್ಯರ್ಥಿಗಳು 2 ಸ್ಥಾನಗಳಲ್ಲಿ ಮುಂದಿದ್ದಾರೆ. 

ಬಹುಜನ ಸಮಾಜ ಪಕ್ಷವು ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ, ಸಿಪಿಐ(ಎಂ) ಮತ್ತು ಐಎನ್‌ಡಿ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಂಚೆ ಮತಗಳ ಎಣಿಕೆ ನಂತರ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮೂಲಕ ಎಣಿಕೆ ಆರಂಭವಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ದಾರ್‌ಪುರ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ದಿಯಾ ಕುಮಾರಿ ಅವರು ವಿದ್ಯಾಧರ್ ನಗರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಜೈಪುರದ ಝೋತ್ವಾರಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇಂದು  ಮಧ್ಯಾಹ್ನ 12 ಗಂಟೆಯ ವೇಳೆಗೆ ಮುಂದಿನ ಸರ್ಕಾರ ಯಾರು ರಚಿಸುತ್ತಾರೆ ಎಂಬ ಚಿತ್ರಣ ಬಹುತೇಕ ನಿಚ್ಚಳವಾಗಲಿದೆ.
ರಾಜಸ್ಥಾನದ 199 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 25ರಂದು ಮತದಾನ ನಡೆದಿತ್ತು. ಶ್ರೀಕರನ್‌ಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಕುನ್ನಾರ್ ನಿಧನರಾದ ಕಾರಣ ಅಲ್ಲಿ ಚುನಾವಣೆ ನಡೆದಿಲ್ಲ.

ರಾಜ್ಯದಲ್ಲಿ ಒಟ್ಟು 1,862 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಜ್ಮೀರ್ ದಕ್ಷಿಣ ಕ್ಷೇತ್ರದ ಫಲಿತಾಂಶವನ್ನು ಮೊದಲು ನಿರೀಕ್ಷಿಸಲಾಗಿದ್ದು, ಶಿವ ಕ್ಷೇತ್ರದ ಫಲಿತಾಂಶ ತಡವಾಗಲಿದೆ.

ಚುನಾವಣಾ ಆಯೋಗದ ಪ್ರಕಾರ, ರಾಜಸ್ಥಾನದ ಬಾರ್ಮರ್‌ನ ಶಿವ ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಸಂಖ್ಯೆಯ ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಇಲ್ಲಿ ಗರಿಷ್ಠ 34 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಈ ಸ್ಥಾನದ ಫಲಿತಾಂಶ ಕೊನೆಯದಾಗಿ ಬರಲಿದೆ.
ಅದೇ ಸಮಯದಲ್ಲಿ, ಅಜ್ಮೀರ್ ದಕ್ಷಿಣ ವಿಧಾನಸಭಾ ಸ್ಥಾನದ ಮತಗಳ ಎಣಿಕೆ ಕನಿಷ್ಠ 14 ಸುತ್ತುಗಳಲ್ಲಿ ನಡೆಯುತ್ತದೆ. ಆದ್ದರಿಂದ ಈ ಸ್ಥಾನದಿಂದ ಮೊದಲ ಫಲಿತಾಂಶವನ್ನು ನಿರೀಕ್ಷಿಸಲಾಗಿದೆ.

ಈಮಧ್ಯೆ, ಬಿಜೆಪಿ ಹಿರಿಯ ನಾಯಕಿ ಅಲ್ಕಾ ಗುರ್ಜರ್ ಅವರು ಈ ಟ್ರೆಂಡ್ ಬಗ್ಗೆ ತಮ್ಮ ಸಂತೋಷ ವ್ಯಕ್ತಪಡಿಸಿದ್ದಾರೆ. ಆರಂಭಿಕ ಟ್ರೆಂಡ್‌ಗಳಲ್ಲಿ ತಮ್ಮ ಪಕ್ಷವು 100ರ ಗಡಿ ದಾಟಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT