ಹಿಂಸಾಚಾರ ನಡೆದ ಪ್ರದೇಶದಲ್ಲಿ ಸೇನಾ ಸಿಬ್ಬಂದಿ 
ದೇಶ

ಮಣಿಪುರದಲ್ಲಿ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಶವ ಪತ್ತೆ: ಉಗ್ರರದ್ದೆಂಬ ಶಂಕೆ!

ಮಣಿಪುರದಲ್ಲಿನ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಮಂದಿಯ ಶವ ಪತ್ತೆಯಾಗಿದ್ದು, ಇವರನ್ನು ಉಗ್ರರೆಂದು ಶಂಕಿಸಲಾಗಿದೆ.

ಮಣಿಪುರ: ಮಣಿಪುರದಲ್ಲಿನ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಮಂದಿಯ ಶವ ಪತ್ತೆಯಾಗಿದ್ದು, ಇವರನ್ನು ಉಗ್ರರೆಂದು ಶಂಕಿಸಲಾಗಿದೆ.

ತೆಂಗನೌಪಾಲ್ ಜಿಲ್ಲೆಯಲ್ಲಿ ಈ ಶವಗಳು ಪತ್ತೆಯಾಗಿದ್ದು, ಈ ಪ್ರದೇಶ ಮ್ಯಾನ್ಮಾರ್ ನೊಂದಿಗೆ ಗಡಿ ಹಂಚಿಕೊಂಡಿದೆ. ಇದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರದಿಂದ ಪ್ರಭಾವಿತವಾದ ಜಿಲ್ಲೆಗಳಲ್ಲಿ ಒಂದಾಗಿದೆ.

ವರದಿಗಳ ಪ್ರಕಾರ ಸೋಮವಾರದಂದು ಜಿಲ್ಲೆಯ ಲೀತು ಎಂಬ ಗ್ರಾಮದಲ್ಲಿ ಉಗ್ರರು ತಮ್ಮ ನೆಲೆಗಳನ್ನು ಹೊಂದಿರುವ ಮ್ಯಾನ್ಮಾರ್‌ಗೆ ತೆರಳುತ್ತಿದ್ದಾಗ  ಗುಂಡಿನ ಚಕಮಕಿ ನಡೆದಿದೆ. ಈ ವೇಳೆ 13 ಮಂದಿ ಮೃತಪಟ್ಟಿದ್ದಾರೆ.

ಮೃತದೇಹಗಳು ಪತ್ತೆಯಾಗಿರುವುದನ್ನು ಪೊಲೀಸ್ ಮಹಾನಿರ್ದೇಶಕ ರಾಜೀಬ್ ಸಿಂಗ್ ಖಚಿತಪಡಿಸಿದ್ದಾರೆ. ಮೃತದೇಹಗಳನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

"ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ನಿಜ ಆದರೆ ಅವರು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎಂಬುದು ನಮಗೆ ತಿಳಿದಿಲ್ಲ. ತನಿಖೆಯ ನಂತರ ನಾವು ಅದನ್ನು ತಿಳಿಯುತ್ತೇವೆ ಎಂದು ಸಿಂಗ್ ಈ ಪತ್ರಿಕೆ ನೀಡಿದ್ದಾರೆ.

ಮೇ 3 ರಂದು ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ ಸುಮಾರು 200 ಜನರು ಸಾವನ್ನಪ್ಪಿದ್ದರೆ, 60,000 ಜನರು ಇದೇ ಕಾರಣದಿಂದ ಸ್ಥಳಾಂತರಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT