ದೇಶ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸೋಲು: ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ?

Srinivas Rao BV

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಡಿ.05 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

230 ವಿಧಾನಸಭಾ ಕ್ಷೇತ್ರಗಳಿರುವ ರಾಜ್ಯದಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆದ್ದಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಿದೆ.

ಕಮಲ್ ನಾಥ್ ಇತ್ತೀಚಿನ ದಿನಗಳಲ್ಲಿ ಎಸ್ ಪಿ ನಾಯಕ ಅಖಿಲೇಶ್ ಯಾದವ್ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಬಗ್ಗೆ ಸ್ಥಾನ ಹಂಚಿಕೆ ಕುರಿತು ನೀಡಿರುವ ಹೇಳಿಕೆಗಳ ಬಗ್ಗೆಯೂ ಕಾಂಗ್ರೆಸ್ ನ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂದು ಹೇಳಲಾಗುತ್ತಿದೆ.

ಮಧ್ಯಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸ್ಥಾನ ಹಂಚಿಕೆಯಲ್ಲಿ 6 ಸ್ಥಾನಗಳನ್ನು ಬಿಟ್ಟುಕೊಡುವಂತೆ ಕೇಳಿತ್ತು, ಆದರೆ ಜೆಡಿಯು ಒಂದೇ ಒಂದು ಸ್ಥಾನ ಬಿಟ್ಟುಕೊಡುವಂತೆ ಕಾಂಗ್ರೆಸ್ ಮುಂದೆ ಬೇಡಿಕೆ ಸಲ್ಲಿಸಿತ್ತು. ಆದರೆ ಇವೆರಡಕ್ಕೂ ಕಮಲ್ ನಾಥ್ ಒಪ್ಪಿಗೆ ನೀಡಿರಲಿಲ್ಲ.

SCROLL FOR NEXT