ಶಿವರಾಜ್ ಸಿಂಗ್ ಚೌಹಾಣ್ 
ದೇಶ

ನಾನು ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ: ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದ್ದು, ಪಕ್ಷದ ಹಲವು ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

ಭೋಪಾಲ್: ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದ್ದು, ಪಕ್ಷದ ಹಲವು ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

ಈ ಮಧ್ಯೆ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ನಾನು ಈ ಹಿಂದೆಯೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಇವತ್ತೂ ಆಕಾಂಕ್ಷಿ ಆಗಿಲ್ಲ. ಒಬ್ಬ ಕಾರ್ಯಕರ್ತನಾಗಿ ಪಕ್ಷ ನೀಡುವ ಯಾವುದೇ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನಮ್ಮ ನಾಯಕ ಮತ್ತು ನಾನು ಅವರೊಂದಿಗೆ ಕೆಲಸ ಮಾಡಲು ಯಾವಾಗಲೂ ಹೆಮ್ಮೆ ಪಡುತ್ತೇನೆ ಎಂದು ಸಿಎಂ ಚೌಹಾಣ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಬಿಜೆಪಿ ನಾಯಕ ಹೇಳಿಕೊಂಡಿದ್ದಾರೆ.

“ಪ್ರಧಾನಿ ಮೋದಿ ನಮ್ಮ ನಾಯಕ ಮತ್ತು ಅವರೊಂದಿಗೆ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ವೈಭವಯುತ, ಸಮೃದ್ಧ ಮತ್ತು ಶಕ್ತಿಯುತ ಭಾರತವನ್ನು ನಿರ್ಮಿಸಲಾಗುತ್ತಿದೆ ಎಂದು ಚೌಹಾಣ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ