ಪ್ರಧಾನಿ ಮೋದಿ 
ದೇಶ

ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ: ಪ್ರಧಾನಿ ಮೋದಿ ಸ್ಮರಣೆ

ಶೋಷಿತ ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಡಾ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ದೇಶಾದ್ಯಂತ ಮಹಾಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. 

ನವದೆಹಲಿ: ಶೋಷಿತ ಮತ್ತು ವಂಚಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಡಾ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ದೇಶಾದ್ಯಂತ ಮಹಾಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. 

ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಅಲ್ಲದೆ, ಸಾಮಾಜಿಕ ಸೌಹಾರ್ದತೆಯ ಅಮರ ಹೋರಾಟಗಾರರಾಗಿದ್ದರು. ದಲಿತ ಕುಟುಂಬದಿಂದ ಬಂದ ಅಂಬೇಡ್ಕರ್ ಹಿಂದುಳಿದವರ ಪರವಾಗಿ ಹೋರಾಡುವ ಮೂಲಕ ಭಾರತದ ರಾಜಕೀಯದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾದರು ಎಂದು ಕೂಡ ಪ್ರಧಾನಿ ಸ್ಮರಿಸಿದ್ದಾರೆ. 

ದಲಿತ ಹಿನ್ನಲೆಯ ಅಂಬೇಡ್ಕರ್ ಅವರು 1956 ರಲ್ಲಿ ಅವರು ನಿಧನರಾದಾಗಿನಿಂದ ಅವರ ತತ್ವ, ವಿಚಾರಧಾರೆಗಳು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಾ ಹೋಗುತ್ತಿದೆ. ನಾಯಕರು, ವಿಶೇಷವಾಗಿ ದಲಿತ ಹಿನ್ನೆಲೆಯುಳ್ಳವರು, ಶಿಕ್ಷಣ, ಸಾಂವಿಧಾನಿಕ ಆಂದೋಲನ ಮತ್ತು ತಮ್ಮ ಬಲವರ್ಧನೆಗಾಗಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅನುಸರಿಸಿಕೊಂಡು ಹೋಗುತ್ತಿದ್ದಾರೆ. ಪರಿಶಿಷ್ಟ ಜಾತಿಗಳು, ಪ್ರಭಾವಿ ಮತದಾರ ಬಣ ಮತ್ತು ಇತರ ದುರ್ಬಲ ವರ್ಗಗಳನ್ನು ಒಟ್ಟುಗೂಡಿಸಲು ಕೂಡ ಅಂಬೇಡ್ಕರ್ ವಿಚಾರಧಾರೆಗಳನ್ನು ಬಳಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT