ಬಾಬ್ರಿ ಮಸೀದಿ 
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ: ಅಯೋಧ್ಯೆಯಲ್ಲಿ ಪೊಲೀಸ್ ಭದ್ರತೆ ಹೆಚ್ಚಳ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್ 6ಕ್ಕೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 31 ವರ್ಷ ಪೂರೈಸುತ್ತದೆ. ಈ ಘಟನೆಯ ದಿನದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಅಯೋಧ್ಯೆ ಪೊಲೀಸರು ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.
1992ರಲ್ಲಿ ಬಾಬ್ರಿ ಮಸೀದಿ ಧ್ವಂಸವು ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು.

ನಗರಕ್ಕೆ ಭೇಟಿ ನೀಡುವ ಜನರ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ಇಡಲಾಗಿದೆ ಮತ್ತು ಅವರ ಗುರುತಿನ ಚೀಟಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಅಲ್ಲದೆ, ಪೊಲೀಸರು ಅಯೋಧ್ಯೆಯ ವಿವಿಧ ಪ್ರದೇಶಗಳಲ್ಲಿ ವಾಹನ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

ಈಮಧ್ಯೆ, ಅಯೋಧ್ಯೆಯ ಎಸ್‌ಎಸ್‌ಪಿ ರಾಜಕರಣ್ ನಯ್ಯರ್, ವದಂತಿಗಳನ್ನು ಹರಡುವುದರಿಂದ ಮತ್ತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವುದರಿಂದ ಜನರು ದೂರವಿರಬೇಕು ಎಂದು ಒತ್ತಾಯಿಸಿದರು.

'ಅಯೋಧ್ಯೆಯ ವಿವಿಧ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಹತ್ತಿರದ ಜಿಲ್ಲೆಗಳಿಂದ ಪೊಲೀಸ್ ಪಡೆಗಳನ್ನು ಸಹ ಕರೆಸಲಾಗಿದೆ. ಯುಪಿ ಪೊಲೀಸರ ಪ್ರಾದೇಶಿಕ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಸಹ ಇಲ್ಲಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ಸಮಗ್ರ ಪೊಲೀಸ್ ವ್ಯವಸ್ಥೆಯನ್ನು ರಚಿಸಲಾಗಿದೆ' ಎಂದು ಅವರು ಹೇಳಿದರು.

'ನಮ್ಮ ಮಾಹಿತಿ ವ್ಯವಸ್ಥೆ ಮತ್ತು ಸಾಮಾಜಿಕ ಮಾಧ್ಯಮ ತಂಡವು ಅಂತಹ ವೇದಿಕೆಗಳ ಮೂಲಕ ಹಂಚಿಕೊಳ್ಳುವ ಯಾವುದೇ ಮಾಹಿತಿಯನ್ನು ಪರಿಶೀಲಿಸುವಲ್ಲಿ ಸಕ್ರಿಯವಾಗಿದೆ ಮತ್ತು ಎಚ್ಚರದಿಂದಿದೆ. ಯಾರೂ ವದಂತಿಗಳನ್ನು ಹರಡಲು ಅಥವಾ ಗೊಂದಲ ಸೃಷ್ಟಿಸಲು ಪ್ರಯತ್ನಿಸಬೇಡಿ. ಪ್ರಮುಖ ಸ್ಥಳಗಳ ಮೇಲೆ ಗಮನ ಕೇಂದ್ರೀಕರಿಸಿ ಅಗತ್ಯಕ್ಕೆ ಅನುಗುಣವಾಗಿ ಪೊಲೀಸ್ ನಿಯೋಜನೆಯನ್ನು ಮಾಡಲಾಗಿದೆ' ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಡಿಸೆಂಬರ್ 6, 1992ರಂದು ಅಯೋಧ್ಯೆಯಲ್ಲಿ 'ಕರ ಸೇವಕರ' ದೊಡ್ಡ ಗುಂಪೊಂದು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದರು. ದೇಶದ ವಿವಿಧ ಭಾಗಗಳಲ್ಲಿ ಗಲಭೆಗಳು ಭುಗಿಲೆದ್ದವು, ಇದರಲ್ಲಿ 1,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT