ದೇಶ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿ

Srinivasamurthy VN

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಒಂದು ದಿನದ ನಂತರ ಬುಧವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಆರ್ ಎಸ್ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಂದು ರೇವಂತ್ ರೆಡ್ಡಿ ದೆಹಲಿಗೆ ಪ್ರಯಾಣಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

ಬಳಿಕ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ರೇವಂತ್ ರೆಡ್ಡಿ ಗುರುವಾರ ಹೈದರಾಬಾದ್‌ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಬುಧವಾರದ ನಂತರ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ರೇವಂತ್ ರೆಡ್ಡಿ ಅವರು ತೆಲಂಗಾಣದ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 

ಆಂಧ್ರಪ್ರದೇಶವನ್ನು ವಿಭಜಿಸಿ ರಾಜ್ಯ ರಚನೆಯಾದ ಒಂಬತ್ತು ವರ್ಷಗಳ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. BRS ಪ್ರಾಬಲ್ಯದ ರಾಜ್ಯದಲ್ಲಿ ಸರ್ಕಾರ ರಚಿಸಲು ಪಕ್ಷವು 64 ಅಸೆಂಬ್ಲಿ ಸ್ಥಾನಗಳನ್ನು ಗೆದ್ದಿದೆ.

SCROLL FOR NEXT