ವಸುಂಧರಾ ರಾಜೆ 
ದೇಶ

ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ: ದೆಹಲಿಗೆ ತೆರಳಿದ ವಸುಂಧರಾ ರಾಜೆ

ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು, ಮಾಜಿ ಸಿಎಂ ವಸುಂಧರಾ ರಾಜೆ ದಿಢೀರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. 

ಜೈಪುರ: ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು, ಮಾಜಿ ಸಿಎಂ ವಸುಂಧರಾ ರಾಜೆ ದಿಢೀರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. 

ಗುರುವಾರದಂದು ರಾಜೆ ಬಿಜೆಪಿ ಹೈಕಮಾಂಡ್ ನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಹೊಸದಾಗಿ ಚುನಾಯಿತರಾದ ಸುಮಾರು 60 ಬಿಜೆಪಿ ಶಾಸಕರು ಸಿವಿಲ್ ಲೈನ್ಸ್ ನಲ್ಲಿರುವ ನಿವಾಸದಲ್ಲಿ ವಸುಂಧರಾ ರಾಜೆ ಅವರನ್ನು ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ.

ಮುಖ್ಯಮಂತ್ರಿಯ ಹೆಸರನ್ನು ಪಕ್ಷದ ಸಂಸದೀಯ ಮಂಡಳಿ ನಿರ್ಧರಿಸಲಿದೆ ಮತ್ತು ಅದಕ್ಕೂ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ, ಶಾಸಕಾಂಗ ಪಕ್ಷದ ಸಭೆ ಕುರಿತು ಪಕ್ಷ ಇನ್ನೂ ಯಾವುದೇ ಘೋಷಣೆ ಮಾಡಿಲ್ಲ. 2003 ರಿಂದ 2008 ಹಾಗೂ 2013-18 ಅವಧಿಯಲ್ಲಿ ವಸುಂಧರಾ ರಾಜೆ 2 ಅವಧಿಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು.

2018 ರಲ್ಲಿ ಬಿಜೆಪಿಯ ಸೋಲಿನ ನಂತರ ಮತ್ತು ಪಕ್ಷದೊಳಗಿನ ಬದಲಾದ ಬೆಳವಣಿಗೆಗಳ ನಂತರ, ರಾಜೆ ಅವರನ್ನು ಬದಿಗಿರಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದ್ದು, ಮೂರನೇ ಬಾರಿಗೆ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದೆಂಬ ನಿರೀಕ್ಷೆ ಅವರ ಬೆಂಬಲಿಗರಲ್ಲಿದೆ.

ಭಾನುವಾರ ಪ್ರಕಟವಾದ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 115 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಪಡೆದುಕೊಂಡಿದೆ. ರಾಜ್ಯದ 200 ಸ್ಥಾನಗಳ ಪೈಕಿ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆದಿತ್ತು.

ಕಾಂಗ್ರೆಸ್ ಅಭ್ಯರ್ಥಿ ನಿಧನದಿಂದ ಚುನಾವಣೆ ಮುಂದೂಡಲ್ಪಟ್ಟಿದ್ದ ಕರಣ್‌ಪುರದಲ್ಲಿ ಜನವರಿ 5ರಂದು ಮತದಾನ ನಡೆಯಲಿದ್ದು, ಜನವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT