ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತ ಸುಪ್ರೀಂ ಕೋರ್ಟ್ ಆದೇಶ ಡಿಸೆಂಬರ್ 11 ಕ್ಕೆ
ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ.
ನವದೆಹಲಿ: ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ.
ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಕೋರ್ಟ್ ವೆಬ್ ಸೈಟ್ ನಲ್ಲಿ ತಿಳಿಸಲಾಗಿದೆ. ಪಂಚ ಸದಸ್ಯ ಪೀಠದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿಆರ್ ಗವಾಯಿ ಹಾಗೂ ನ್ಯಾ.ಸೂರ್ಯ ಕಾಂತ್ ಸಹ ಇದ್ದಾರೆ.
16 ದಿನಗಳ ವಿಚಾರಣೆಯ ನಂತರ ಸೆ.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.
ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಅರ್ಜಿ ಸಲ್ಲಿಸಿದ್ದವರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಹ್ಮಣೀಯಮ್, ರಾಜೀವ್ ಧವನ್, ಜಫರ್ ಶಾ, ದುಷ್ಯಂತ್ ದಾವೆ ವಾದಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.