ದೇಶ

ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ; ಸಂಸದ ಸ್ಥಾನಕ್ಕೆ ಇಂದೇ ರಾಜೀನಾಮೆ ಸಾಧ್ಯತೆ

Lingaraj Badiger

ನವದೆಹಲಿ: ತೆಲಂಗಾಣ ನೂತನ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದು, ತಮ್ಮ ಸಂಸದ ಸ್ಥಾನಕ್ಕೆ ಇಂದೇ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

ತೆಲಂಗಾಣದ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರೇವಂತ್ ರೆಡ್ಡಿ ಅವರು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇದೇ ವೇಳೆ ರೆಡ್ಡಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಮತ್ತು ತೆಲಂಗಾಣದಲ್ಲಿ ಮೊದಲ ವಿಧಾನಸಭೆ ಅಧಿವೇಶನಕ್ಕೆ ಮುಂಚಿತವಾಗಿ ಚುನಾವಣಾ ಪ್ರಚಾರದ ವೇಳೆ ಪಕ್ಷ ಭರವಸೆ ನೀಡಿದ ಆರು ಗ್ಯಾರಂಟಿಗಳ ಅನುಷ್ಠಾನ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರೇವಂತ್ ರೆಡ್ಡಿ ಅವರು ಗುರುವಾರ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಪ್ರಮಾಣ ವಚನ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರು ಭಾಗವಹಿಸಿದ್ದರು.

SCROLL FOR NEXT