ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಗೋಡೆ ಕುಸಿತ; ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಉತ್ತರ ಪ್ರದೇಶದ ಘೋಸಿಯಲ್ಲಿ ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಗೋಡೆ ಕುಸಿದಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮೌ: ಉತ್ತರ ಪ್ರದೇಶದ ಘೋಸಿಯಲ್ಲಿ ವಿವಾಹ ಪೂರ್ವ ಕಾರ್ಯಕ್ರಮದ ವೇಳೆ ಗೋಡೆ ಕುಸಿದಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಒಟ್ಟು ಆರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ.

ಮೃತರನ್ನು ಪೂನಂ ಶರ್ಮಾ(42), ಮೀರಾ(36), ಪೂಜಾ (35), ಚಂದಾ ದೇವಿ (30), ಸುಶೀಲಾ (52), ಲಾಲ್ತಿ (60), ಅನ್ವಿಯಾ (4) ಮತ್ತು ಮಾಧವ್ (8) ಎಂದು ಗುರುತಿಸಲಾಗಿದೆ.

ಗಾಯಗೊಂಡ ಇತರ 20 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಎಲ್ಲಾ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ ಮತ್ತು ಎಲ್ಲಾ ಗಾಯಾಳುಗಳಿಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ