ಹೊತ್ತಿ ಉರಿದ ವಾಹನಗಳು 
ದೇಶ

ಕಾರು-ಡಂಪರ್ ಮುಖಾಮುಖಿ ಡಿಕ್ಕಿ: ಟೈರ್ ಸ್ಫೋಟಗೊಂಡು 8 ಮಂದಿ ಸಜೀವ ದಹನ

ಡಂಪರ್ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು 8 ಮಂದಿ ಸಜೀವ ದಹನಗೊಂಡಿರುವ ದುರ್ಘಟನೆ ನಿನ್ನೆ ಶನಿವಾರ ರಾತ್ರಿ ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬರೇಲಿ(ಉತ್ತರ ಪ್ರದೇಶ): ಡಂಪರ್ ಮತ್ತು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು 8 ಮಂದಿ ಸಜೀವ ದಹನಗೊಂಡಿರುವ ದುರ್ಘಟನೆ ನಿನ್ನೆ ಶನಿವಾರ ರಾತ್ರಿ ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಡಂಪರ್ ನ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಹೊತ್ತಿ ಉರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಡಿಕ್ಕಿಯ ನಂತರ ದೊಡ್ಡ ಸ್ಫೋಟದ ಶಬ್ಧ ಕೇಳಿಬಂದು ಎರಡೂ ವಾಹನಗಳು ಹೊತ್ತಿ ಉರಿಯಿತು, ಪಕ್ಕದ ನಿವಾಸಿಗಳು ಕೂಡಲೇ ಸ್ಥಳಕ್ಕೆ ಹೋಗಿ ಪರಿಸ್ಥಿತಿ ನೋಡಿ ಪೊಲೀಸರಿಗೆ ಸುದ್ದಿ ತಲುಪಿಸಿದರು ಎನ್ನುತ್ತಾರೆ.

ಪೊಲೀಸ್ ತಂಡ ಮತ್ತು ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕೆ ಧಾವಿಸಿ ಹೊತ್ತಿ ಉರಿಯುತ್ತಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಿದರು. ಆದರೆ ಕಾರಿನೊಳಗೆ ಸಿಲುಕಿಹಾಕಿಕೊಂಡವರನ್ನು ಹೊರಗೆ ತರಲು ಸಾಧ್ಯವಾಗದೇ ಸ್ಥಳದಲ್ಲಿಯೇ ಸಜೀವ ದಹನಗೊಂಡರು.

ಡಂಪರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಕಾರಿನಲ್ಲಿದ್ದ ಎಂಟು ಮಂದಿ ಸಜೀವ ದಹನವಾಗಿದ್ದಾರೆ ಎಂದು ಸ್ಥಳೀಯ ಎಸ್ ಎಸ್ ಪಿ ತಿಳಿಸಿದ್ದಾರೆ. ಕಾರು ಬರೇಲಿಯಿಂದ ಬಹೇರಿಗೆ ಸಂಚರಿಸುತ್ತಿತ್ತು. 

ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಮೃತಪಟ್ಟ 8 ಮಂದಿಯಲ್ಲಿ ಒಂದು ಮಗು ಕೂಡ ಸೇರಿದೆ. ಹೆಚ್ಚಿನ ವಿವರ ಸಿಗಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT