ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜಸ್ಥಾನ: ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಮುಂದಿನ ಸಿಎಂ ಘೋಷಣೆ!

ರಾಜಸ್ಥಾನದಲ್ಲಿ ಹೊಸದಾಗಿ ಚುನಾಯಿತರಾದ ಬಿಜೆಪಿ ಶಾಸಕರು ಮಂಗಳವಾರ ಜೈಪುರದಲ್ಲಿ ಸಭೆ ಸೇರಲಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 11 Dec 2023, 8:20 pm

ಜೈಪುರ: ರಾಜಸ್ಥಾನದಲ್ಲಿ ಹೊಸದಾಗಿ ಚುನಾಯಿತರಾದ  ಬಿಜೆಪಿ ಶಾಸಕರು ಮಂಗಳವಾರ ಜೈಪುರದಲ್ಲಿ ಸಭೆ ಸೇರಲಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ನೂತನವಾಗಿ ಆಯ್ಕೆಯಾಗಿರುವ ಬಿಜೆಪಿಯ ಎಲ್ಲಾ ಶಾಸಕರ ನೋಂದಣಿ ಕಾರ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಹೊಸದಾಗಿ ಆಯ್ಕೆಯಾದ ಎಲ್ಲ ಶಾಸಕರು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಭಜನಲಾಲ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹೊಸ ಮುಖಕ್ಕೆ ಮಣೆ; ಮುಖ್ಯಮಂತ್ರಿ ಆಗಿ ಮೋಹನ್ ಯಾದವ್ ಆಯ್ಕೆ!

Advertisement

Advertisement

ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಸರೋಜ್ ಪಾಂಡೆ ಮತ್ತು  ವಿನೋದ್ ತಾವ್ಡೆ ಸಭೆಯಲ್ಲಿ ಉಪಸ್ಥಿತರಿರುವರು ಎಂದು ರಾಜಸ್ಥಾನದ ಬಿಜೆಪಿ ನಾಯಕ ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ದಲಿತ ನಾಯಕರೊಬ್ಬರನ್ನು ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ,ನಾಳೆ ಎಲ್ಲವೂ ಬಹಿರಂಗವಾಗಲಿದೆ ಎಂದು ಸಿಂಗ್ ಹೇಳಿದರು.

ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಮೂರು ರಾಜ್ಯಗಳ ಪೈಕಿ ಒಂದಾದ ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ಅವರು ಸಿಎಂ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಲಾಗಿದೆ.

ನವೆಂಬರ್ 25 ರ ಚುನಾವಣೆಯ ಫಲಿತಾಂಶ ಬಂದ ಒಂಬತ್ತು ದಿನಗಳ ನಂತರ ಬಿಜೆಪಿಯ ಕೇಂದ್ರ ನಾಯಕತ್ವವು ಶಾಸಕಾಂಗ ಪಕ್ಷದ ಸಭೆಯ ಬಗ್ಗೆ ಸೋಮವಾರ ಶಾಸಕರಿಗೆ ಮಾಹಿತಿ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments