ದೇಶ

ಡಿ.13ರಂದು ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣವಚನ

Lingaraj Badiger

ರಾಯ್‌ಪುರ: ಭಾರತೀಯ ಜನತಾ ಪಕ್ಷದ ನಾಯಕ ವಿಷ್ಣು ದೇವ್ ಸಾಯಿ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಡಿಸೆಂಬರ್ 13 ರಂದು ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಷ್ಣು ದೇವ್ ಸಾಯಿ ಅವರು ಬುಧವಾರ ರಾಯ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಿಜೆಪಿಯ ಮೊದಲ ಬುಡಕಟ್ಟು ಸಿಎಂ ಆಗಲಿರುವ ಸಾಯಿ(59) ಜೊತೆಗೆ ಅವರ ಮಂತ್ರಿಮಂಡಲವೂ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸಾಂವಿಧಾನಿಕ ನಿಯಮಗಳ ಪ್ರಕಾರ, 90 ಸದಸ್ಯ ಬಲ ಹೊಂದಿರುವ ಛತ್ತೀಸ್‌ಗಢದಲ್ಲಿ, ಸಿಎಂ ಸೇರಿದಂತೆ ಗರಿಷ್ಠ 13 ಸಚಿವರನ್ನು ಹೊಂದಬಹುದು.

ರಾಜ್ಯ ರಾಜಧಾನಿಯ ವಿಜ್ಞಾನ ಕಾಲೇಜು ಮೈದಾನದಲ್ಲಿ ಡಿಸೆಂಬರ್ 13 ರಂದು ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.

ಸಮಾರಂಭದಲ್ಲಿ ಮೋದಿಯವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ, ಪಕ್ಷದ ಛತ್ತೀಸ್‌ಗಢ ಉಸ್ತುವಾರಿ ಓಂ ಮಾಥುರ್ ಮತ್ತು ಇತರ ಕೆಲವು ರಾಜ್ಯಗಳ ಸಿಎಂಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

SCROLL FOR NEXT