ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

2024 ರ ಲೋಕಸಭಾ ಚುನಾವಣೆ: ಬಿಜೆಪಿಗೆ ಮತ್ತೆ ಅಧಿಕಾರ ಸಾಧ್ಯತೆ- Fitch ರೇಟಿಂಗ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಂದು ಜಾಗತಿಕ ರೇಟಿಂಗ್ ಸಂಸ್ಥೆ ಫಿಚ್ ಮಂಗಳವಾರ ತಿಳಿಸಿದೆ.

ಪ್ರಧಾನಿ ಮೋದಿ, ಜೆಪಿ ನಡ್ಡಾ
Nagaraja AB
Updated On : 12 Dec 2023, 7:45 pm

ನವದೆಹಲಿ:  2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಎಂದು ಜಾಗತಿಕ ರೇಟಿಂಗ್ ಸಂಸ್ಥೆ ಫಿಚ್  ಮಂಗಳವಾರ ತಿಳಿಸಿದೆ. ಆದಾಗ್ಯೂ, ಮುಂದಿನ ಸಂಸತ್ತಿನಲ್ಲಿ ಬಹುಮತದ ಸಂಖ್ಯೆಯು ಆಡಳಿತ ಸುಧಾರಣಾ ಕಾರ್ಯಸೂಚಿಯ ಮಹತ್ವಾಕಾಂಕ್ಷೆಯ ಮೇಲೆ ಪ್ರಭಾವ ಬೀರಬಹುದು ಎಂದು ಅದು ಹೇಳಿದೆ.

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಭಾರತದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ. ಅದೇ ರೀತಿಯಲ್ಲಿ ಬಾಂಗ್ಲಾದೇಶದಲ್ಲಿ ಆಡಳಿತಾರೂಢ ಪಕ್ಷಕ್ಕೆ ಮತ್ತೆ ಅಧಿಕಾರದ ಗದ್ದುಗೆ ಹಿಡಿಯಬಹುದು. ಇದು ವಿಶಾಲ ನೀತಿಯ ನಿರಂತರತೆಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದು ಫಿಚ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Rajasthan CM: ರಾಜಸ್ಥಾನದ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಆಯ್ಕೆ!

Advertisement

Advertisement

2014 ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, 2019 ರ ಸಾರ್ವತ್ರಿಕ ಚುನಾವಣೆಯಲ್ಲೂ ಭಾರಿ ಬಹುಮತದೊಂದಿಗೆ ಮರಳಿತು. 2024 ರ ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿದ್ದು, ಆಗಲೂ ಮೋದಿ ಸರ್ಕಾರ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಫಿಚ್ ನಿರೀಕ್ಷಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments