ಭಜನ್‌ಲಾಲ್ ಶರ್ಮಾರಿಂದ ರಾಜ್ಯಪಾಲರ ಭೇಟಿ 
ದೇಶ

ರಾಜಸ್ಥಾನ ನಿಯೋಜಿತ ಸಿಎಂ ಭಜನ್‌ಲಾಲ್ ಶರ್ಮಾರಿಂದ ರಾಜ್ಯಪಾಲರ ಭೇಟಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ

ರಾಜಸ್ಥಾನ ನಿಯೋಜಿತ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಮಂಗಳವಾರ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಜೈಪುರ: ರಾಜಸ್ಥಾನ ನಿಯೋಜಿತ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಮಂಗಳವಾರ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಜನ್ ಲಾಲ್ ಶರ್ಮಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಳಿಕ ರಾಜಭವನಕ್ಕೆ ತೆರಳಿದ ಭಜನ್‌ಲಾಲ್ ಶರ್ಮಾ ಅವರು ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸಿಪಿ ಜೋಶಿ ಅವರು ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದು, ಶರ್ಮಾ ಅವರನ್ನು ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶರ್ಮಾ ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಪಕ್ಷದ ಕೇಂದ್ರ ವೀಕ್ಷಕ ರಾಜನಾಥ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಇದ್ದರು.

ಈ ವೇಳೆ ನಿಯೋಜಿತ ಉಪಮುಖ್ಯಮಂತ್ರಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಕೂಡ ಉಪಸ್ಥಿತರಿದ್ದರು.

ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಪಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT