ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ 
ದೇಶ

ಎಲ್ಲಾ ಮೂರು ಕ್ರಿಮಿನಲ್ ಕಾನೂನು ಮಸೂದೆ ಹಿಂಪಡೆದು, ಹೊಸ ಕರಡು ವಿಧೇಯಕ ಮಂಡಿಸಿದ ಕೇಂದ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬ್ರಿಟಿಷ್‌ ಕಾಲದ ಹಳೆಯ ಮೂರು ಕ್ರಿಮಿನಲ್‌ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳನ್ನು ಮಂಗಳವಾರ ಹಿಂಪಡೆದಿದ್ದು, ಹೊಸ ಕರಡು ವಿಧೇಯಕಗಳನ್ನು ಮಂಡಿಸಿದ್ದಾರೆ.

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬ್ರಿಟಿಷ್‌ ಕಾಲದ ಹಳೆಯ ಮೂರು ಕ್ರಿಮಿನಲ್‌ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳನ್ನು ಮಂಗಳವಾರ ಹಿಂಪಡೆದಿದ್ದು, ಹೊಸ ಕರಡು ವಿಧೇಯಕಗಳನ್ನು ಮಂಡಿಸಿದ್ದಾರೆ.

ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ  ಕೇಂದ್ರ ಸರ್ಕಾರ ಈ ಹಿಂದೆ ಲೋಕಸಭೆಯಲ್ಲಿ ಮಂಡಿಸಿದ್ದ ಕ್ರಿಮಿನಲ್ ಪ್ರೊಸೀಜರ್ ಕೋಡ್- 1898, ಭಾರತೀಯ ದಂಡ ಸಂಹಿತೆ- 1860, ಇಂಡಿಯನ್ ಎವಿಡೆನ್ಸ್ ಆಕ್ಟ್- 1872 ಒಳಗೊಂಡ ಮಸೂದೆಗಳನ್ನು ಹಿಂಪಡೆಯಲಾಗಿದೆ. 

ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ಮುಂಗಾರು ಅಧಿವೇಶನದ ವೇಳೆ ಈ ಮೂರು ವಿಧೇಯಕಗಳನ್ನು ಮಂಡಿಸಲಾಗಿತ್ತು. ಆದರೆ ಅವುಗಳಿಗೆ ಸಂಸದೀಯ ಸ್ಥಾಯಿ ಸಮಿತಿ ಕೆಲವು ಬದಲಾವಣೆಗಳನ್ನು ಶಿಫಾರಸು ಮಾಡಿತ್ತು. ಹೀಗಾಗಿ ಇಂದು ಆ ಶಿಫಾರಸುಗಳನ್ನು ಒಳಗೊಂಡಿರುವ ಹೊಸ ಕರಡು ವಿಧೇಯಕಗಳನ್ನು ಮಂಡಿಸಿದರು.

ಡಿಸೆಂಬರ್ 11 ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೂರು ಕ್ರಿಮಿನಲ್ ಕಾನೂನು ಮಸೂದೆಗಳನ್ನು ಹಿಂಪಡೆಯಲಾಗುವುದು ಮತ್ತು ಸಂಸದೀಯ ಸಮಿತಿ ಶಿಫಾರಸು ಮಾಡಿದಿ ತಿದ್ದುಪಡಿಗಳನ್ನು ಒಳಗೊಂಡಿರುವ ಮೂರು ಹೊಸ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದರು.

ಇಂದು ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಗೃಹ ಸಚಿವಾಲಯ, ಸಂಸದೀಯ ಸಮಿತಿಯ ಶಿಫಾರಸುಗಳನ್ನು ಅಳವಡಿಸಲು ಹಲವಾರು ತಿದ್ದುಪಡಿಗಳನ್ನು ತರುವ ಬದಲು, ಬದಲಾವಣೆಗಳನ್ನು ಒಳಗೊಂಡಿರುವ ಹೊಸ ಮಸೂದೆಗಳನ್ನು ಮಂಡಿಸಲು ಸರ್ಕಾರ ನಿರ್ಧರಿಸಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT