ದೇಶ

ಸಾಮ್ನಾದಲ್ಲಿ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಲೇಖನ: ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲು

Manjula VN

ನವದೆಹಲಿ: ಶಿವಸೇನೆ ಮುಖವಾಣಿ ಸಾಮ್ನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಶಿವಸೇನಾ (ಉದ್ಧವ್​ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ ಬರೆದ ಆರೋಪದಡಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ಸಂಜಯ್​ ರಾವತ್ ವಿರುದ್ಧ ಯವತ್ಮಾಲ್ ಬಿಜೆಪಿ ಸಂಚಾಲಕ ನಿತಿನ್ ಭೂತಾಡ ಅವರು ನೀಡಿರುವ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಡಿಸೆಂಬರ್ 11 ರಂದು ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನವನ್ನು ಬರೆದಿದ್ದಾರೆ ಎಂದು ಭೂತಾಡಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ರಾವತ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 (ಎ), 505 (2) ಮತ್ತು 124 (ಎ) ಅಡಿಯಲ್ಲಿ ಉಮರ್ಖೇಡ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಈ ಸೆಕ್ಷನ್​ಗಳು ವಿವಿಧ ಗುಂಪುಗಳು ಮತ್ತು ಇತರ ಅಪರಾಧಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ ಎಂಬುದನ್ನು ಹೇಳುತ್ತವೆ.

SCROLL FOR NEXT