ರಾಯ್ಪುರದಲ್ಲಿ ನಿಯೋಜಿತ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಛತ್ತೀಸ್‌ಗಢದ ರಾಜ್ಯಪಾಲ ಬಿಸ್ವಭೂಷಣ ಹರಿಚಂದನ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರರೊಂದಿಗೆ. (ಫೋಟೋ- ಪಿಟಿಐ) 
ದೇಶ

ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ ಸೇರಿ ಹಲವರು ಭಾಗಿ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಕುಂಕುರಿ ಕ್ಷೇತ್ರದ ಶಾಸಕ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮತ್ತು ಶಾಸಕ ವಿಜಯ್ ಶರ್ಮಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಯ್ಪುರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಕುಂಕುರಿ ಕ್ಷೇತ್ರದ ಶಾಸಕ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮತ್ತು ಶಾಸಕ ವಿಜಯ್ ಶರ್ಮಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಛತ್ತೀಸಗಢದ ರಾಜ್ಯಪಾಲ ಬಿಸ್ವಭೂಷಣ ಹರಿಚಂದನ್ ಅವರು ಸಾಯಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಮತ್ತು ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಷ್ಣು ದೇವ್ ಸಾಯಿ

59 ವರ್ಷದ ವಿಷ್ಣು ದೇವ್ ಸಾಯಿ ಅವರು 2020 ರಲ್ಲಿ ರಚಿಸಲಾದ ಛತ್ತೀಸ್‌ಗಢ ರಾಜ್ಯದ ನಾಲ್ಕನೇ ಮುಖ್ಯಮಂತ್ರಿಯಾಗಿದ್ದಾರೆ. ಅರುಣ್ ಸಾವೊ (54) ಅವರು ಪ್ರಭಾವಿ ಸಾಹು (ತೆಲಿ) ಒಬಿಸಿ ಸಮುದಾಯದಿಂದ ಬಂದವರು. ವಿಜಯ್ ಶರ್ಮಾ (50) ಅವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT