ದೇಶ

ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಸೇರಿ ಹಲವರು ಭಾಗಿ

Sumana Upadhyaya

ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮುನ್ನಡೆಸುತ್ತಿರುವ ರೀತಿಯಲ್ಲಿಯೇ ರಾಜ್ಯವೂ ಹೆಜ್ಜೆ ಹಾಕಲಿದೆ ಎಂದು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಮೋಹನ್ ಯಾದವ್ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.   “ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಮುನ್ನಡೆಸುತ್ತಿರುವ ರೀತಿಯಲ್ಲಿಯೇ ಅಭಿವೃದ್ಧಿಯಲ್ಲಿ ಮಧ್ಯಪ್ರದೇಶವು ಹೆಜ್ಜೆಗಳನ್ನು ಅನುಸರಿಸುತ್ತದೆ, ನಾನು ರಾಜ ವಿಕ್ರಮಾದಿತ್ಯನ ನೆಲದಿಂದ ಬಂದಿದ್ದೇನೆ. ರಾಜ್ಯದ ಪ್ರಗತಿಗೆ ಬದ್ಧನಾಗಿರುತ್ತೇನೆ. ಮಧ್ಯಪ್ರದೇಶದ ಕೋಟ್ಯಂತರ ನಾಗರಿಕರ ಆಕಾಂಕ್ಷೆಗಳನ್ನು ಈಡೇರಿಸುತ್ತೇನೆ. ರಾಜ ವಿಕ್ರಮಾದಿತ್ಯನ ಆಳ್ವಿಕೆಯಲ್ಲಿ ಇದ್ದ ಅದೇ ಉತ್ತಮ ಆಡಳಿತವನ್ನು ಜನರು ನಿರೀಕ್ಷಿಸಬಹುದು ಎಂದು ಮೋಹನ್ ಯಾದವ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜೇಂದ್ರ ಶುಕ್ಲ ಹಾಗೂ ಜಗದೀಶ್ ದೇವ್ಡ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. 

SCROLL FOR NEXT