ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ: ಮಧ್ಯ ಪ್ರದೇಶ ನೂತನ ಸಿಎಂ ಮೊದಲ ಆದೇಶ

ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಯಾದವ್ ಅವರು, ರಾಜ್ಯ ಅನುಮತಿಸಲಾದ ಡೆಸಿಬಲ್ ಮಟ್ಟವನ್ನು ಮೀರಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ಆದೇಶ...

ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್
Lingaraj Badiger
Updated On : 13 Dec 2023, 11:09 pm

ಭೋಪಾಲ್: ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಯಾದವ್ ಅವರು, ರಾಜ್ಯ ಅನುಮತಿಸಲಾದ ಡೆಸಿಬಲ್ ಮಟ್ಟವನ್ನು ಮೀರಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಇಂದು ಬೆಳಗ್ಗೆಷ್ಟೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಯಾದವ್ ಅವರು ಹೊರಡಿಸಿದ ಮೊದಲ ಆದೇಶ ಇದಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ) ಡಾ. ರಾಜೇಶ್ ರಾಜೋರಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನು ಓದಿ: ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಸೇರಿ ಹಲವರು ಭಾಗಿ

Advertisement

Advertisement

ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶಗಳ ಆಧಾರದ ಮೇಲೆ ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿಗಳನ್ನು ಸಹ ತಕ್ಷಣ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಬಳಸುವ ಧ್ವನಿವರ್ಧಕಗಳು ಮತ್ತು ಡಿಜೆ ಸಿಸ್ಟಮ್‌ಗಳ ಧ್ವನಿ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಪ್ರತಿ ಜಿಲ್ಲೆಯಲ್ಲೂ ಫ್ಲೈಯಿಂಗ್ ಸ್ಕ್ವಾಡ್ ಅನ್ನು ನಿಯೋಜಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement