ದೇಶ

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ಪ್ರತಿಪಕ್ಷಗಳಿಂದ ನಾಳೆ ರಾಷ್ಟ್ರಪತಿ ಭೇಟಿ

Lingaraj Badiger

ನವದೆಹಲಿ: ಲೋಕಸಭೆ ಕಲಾಪದ ವೇಳೆ ಭಾರೀ ಭದ್ರತಾ ಲೋಪವಾಗಿದ್ದು, ಈ ಸಂಬಂಧ ಪ್ರತಿಪಕ್ಷಗಳ  ನಾಯಕರ ನಿಯೋಗ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದೆ.

ಮೂಲಗಳ ಪ್ರಕಾರ, ನಾಳೆ ಬೆಳಗ್ಗೆ 10 ಗಂಟೆಗೆ ಸಂಸತ್ ಭವನದಲ್ಲಿ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ(ಇಂಡಿಯಾ) ನಾಯಕರ ಸಭೆ ನಡೆಯಲಿದ್ದು, ನಂತರ ರಾಷ್ಟ್ರಪತಿಗಳ ಭೇಟಿಗೆ ಸಮಯ ಕೋರಲಿದ್ದಾರೆ. 

ಇದಲ್ಲದೆ, ನಾಳೆ ಸಂಸತ್ತಿನ ಉಭಯ ಸದನಗಳಲ್ಲಿ ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ವಿರೋಧ ಪಕ್ಷಗಳು ಒತ್ತಾಯಿಸಲಿವೆ.

ಇಂದು ಸಂಸತ್ ಭವನಕ್ಕೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಲೋಕಸಭೆ ಕಲಾಪದ ವೇಳೆ ಸಂದರ್ಶಕರ ಗ್ಯಾಲರಿಯಿಂದ ಕೆಳಗೆ ಇಳಿದು ಬಂದು ಬಣ್ಣದ ಹೊಗೆ ಸಿಡಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ವರುಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

SCROLL FOR NEXT