ಸಂಸತ್ ಭವನ-ಪ್ರತಾಪ್ ಸಿಂಹ 
ದೇಶ

ಸಂಸತ್ ಭದ್ರತಾ ಲೋಪ: ಮೈಸೂರಿನ ಮನೋರಂಜನ್, ಸಾಗರ್ ಶರ್ಮಾಗೆ ಎಂಪಿ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಸಿಕ್ಕಿತ್ತೇ?

ಸಂಸತ್ ಕಲಾಪದ ಒಳಗೆ ಪ್ರವೇಶಿಸಿದ ಇಬ್ಬರಲ್ಲಿ ಒಬ್ಬನ ಹೆಸರು ಸಾಗರ್ ಶರ್ಮಾ ಮತ್ತೊಬ್ಬನ ಹೆಸರು ಮೈಸೂರಿನ ವಿದ್ಯಾರ್ಥಿ ಮನೋರಂಜನ್ ಎಂದು ತಿಳಿದುಬಂದಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದ ಎಂಟನೇ ದಿನದಂದು ಸಂಸತ್ತಿನ ಭದ್ರತೆಯಲ್ಲಿ ಉಲ್ಲಂಘನೆಯಾಗಿದೆ. ಇಬ್ಬರು ಯುವಕರು ಲೋಕಸಭೆಯ ಸಂದರ್ಶಕರ ಗ್ಯಾಲರಿಯಿಂದ ಕೆಳಗೆ ಜಿಗಿದು ಸಂಸತ್ತಿನ ಭದ್ರತೆಯ ನಿಯಮಗಳನ್ನು ಛಿದ್ರಗೊಳಿಸಿದರು. ಏತನ್ಮಧ್ಯೆ, ಇಬ್ಬರು ಆರೋಪಿಗಳು ಕರ್ನಾಟಕದ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿ ವಿಸಿಟರ್ ಪಾಸ್‌ ಪಡೆದು ಸಂಸತ್ತಿಗೆ ಪ್ರವೇಶಿಸಿದ್ದಾರೆ ಎಂಬ ಸುದ್ದಿ ಬರುತ್ತಿದೆ.

ಸಂಸತ್ ಕಲಾಪದ ಒಳಗೆ ಪ್ರವೇಶಿಸಿದ ಇಬ್ಬರಲ್ಲಿ ಒಬ್ಬನ ಹೆಸರು ಸಾಗರ್ ಶರ್ಮಾ ಮತ್ತೊಬ್ಬನ ಹೆಸರು ಮೈಸೂರಿನ ವಿದ್ಯಾರ್ಥಿ ಮನೋರಂಜನ್ ಎಂದು ತಿಳಿದುಬಂದಿದೆ. ಮತ್ತಿಬ್ಬರು ಸಂಸತ್ತಿನ ಹೊರಗೆ ಸಿಕ್ಕಿಬಿದ್ದಿದ್ದಾರೆ. ಇದೀಗ ನಾಲ್ವರ ವಿಚಾರಣೆ ನಡೆಯುತ್ತಿದೆ. ಇವರಿಬ್ಬರೂ ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೆಸರಿನಲ್ಲಿ ಲೋಕಸಭೆಯ ವಿಸಿಟರ್ ಪಾಸ್ ಮೇಲೆ ಬಂದಿದ್ದರು ಎಂದು ಸಂಸದ ಡ್ಯಾನಿಶ್ ಅಲಿ ಹೇಳಿದ್ದಾರೆ. ಶೂನ್ಯ ವೇಳೆಯಲ್ಲಿ ವೀಕ್ಷಕರ ಗ್ಯಾಲರಿಯಿಂದ ಜಿಗಿದ್ದು ಹಳದಿ ಬಣ್ಣದ ಬಾಟಲ್ ಇದರಿಂದ ಅನಿಲ ಬಿಡುಗಡೆಯಾಗಿದೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

42 ವರ್ಷದ ಪ್ರತಾಪ್ ಸಿಂಹ ಮೈಸೂರು ಬಿಜೆಪಿ ಸಂಸದ. ಇವರ ತಂದೆಯ ಹೆಸರು ಲೇಟ್ ಗೋಪಾಲಗೌಡರು. 215-ಚಾಮುಂಡೇಶ್ವರಿ (ಕರ್ನಾಟಕ) ಕ್ಷೇತ್ರ, ಭಾಗ ಸಂಖ್ಯೆ 109 ರಲ್ಲಿ ಮತದಾರರಾಗಿ ಅವರ ಗುರುತು ಸಂಖ್ಯೆ 845 ಆಗಿದೆ. ಕನ್ನಡ ಪತ್ರಿಕೆಗಳಲ್ಲಿ ಅಂಕಣ ಬರೆಯುತ್ತಾರೆ. ಸಿಂಹ ಅವರು ವೃತ್ತಿಯಲ್ಲಿ ಪತ್ರಕರ್ತರು. ಅವರು ತಮ್ಮ ಅಬ್ಬರದ ಹಿಂದುತ್ವ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಕರ್ನಾಟಕದ ಯುವ ಮೋರ್ಚಾವಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷರಾಗಿದ್ದಾರೆ.

ಪ್ರತಾಪ್ ಸಿಂಹ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿದರು. ನಂತರ ಅವರು ತಮ್ಮ ಅಂಕಣ 'ಬೆತ್ತಲೆ ಜಗತ್ತು' ಮೂಲಕ ಗಮನ ಸೆಳೆದರು. ಇದು ಪ್ರಪಂಚದ ಕಡೆಗೆ ತೀಕ್ಷ್ಣವಾದ ಮತ್ತು ವಿಮರ್ಶಾತ್ಮಕ ದೃಷ್ಟಿಕೋನದಿಂದ ತುಂಬಿತ್ತು. 2008ರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಜೀವನಚರಿತ್ರೆಯನ್ನು ಬರೆದಿದ್ದರು.

2014ರಲ್ಲಿ ರಾಜಕೀಯ ಪ್ರವೇಶ
ಅವರು 2014ರಲ್ಲಿ ರಾಜಕೀಯಕ್ಕೆ ಸೇರಿದ್ದರು. ಶೀಘ್ರದಲ್ಲೇ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದರು. 2014ರಲ್ಲಿ ಮೈಸೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ 32000 ಮತಗಳ ಅಂತರದಿಂದ ಎದುರಾಳಿಯ ವಿರುದ್ಧ ಗೆಲುವು ಸಾಧಿಸಿದ್ದರು. ಅವರು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರೂ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT