ರಾಕೇಶ್ ಟಿಕಾಯತ್ 
ದೇಶ

ಲೋಕಸಭೆಗೆ ನುಗ್ಗಿದ ಆರೋಪಿಗಳಿಗೂ ಎಸ್ ಕೆಎಂ, ಬಿಕೆಯುಗೂ ಯಾವುದೇ ಸಂಬಂಧ ಇಲ್ಲ: ರಾಕೇಶ್ ಟಿಕಾಯತ್

ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದನ್ನು ಖಂಡಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರು, ಮಾಧ್ಯಮದ ಒಂದು ವಿಭಾಗ ವರದಿ ಮಾಡಿದಂತೆ ಆರೋಪಿಗಳೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಅಥವಾ...

ನವದೆಹಲಿ: ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದನ್ನು ಖಂಡಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರು, ಮಾಧ್ಯಮದ ಒಂದು ವಿಭಾಗ ವರದಿ ಮಾಡಿದಂತೆ ಆರೋಪಿಗಳೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಅಥವಾ ಭಾರತೀಯ ಕಿಸಾನ್ ಯೂನಿಯನ್‌(ಬಿಕೆಯು) ಯಾವುದೇ ಸಂಬಂಧ ಹೊಂದಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು, ನಿರುದ್ಯೋಗದಂತಹ ಸಮಸ್ಯೆಗಳಿಂದ ಆಕ್ರೋಶಗೊಂಡು ಈ ಕೃತ್ಯ ಎಸಗಿರುವುದಾಗಿ ಬಂಧಿತ ಆರೋಪಿ ಅಮೋಲ್ ಶಿಂಧೆ ಪೊಲೀಸರ ವಿಚಾರಣೆ ವೇಳೆ ಹೇಳಿರುವುದಾಗಿ ಮೂಲವೊಂದು ಪಿಟಿಐಗೆ ತಿಳಿಸಿದೆ.

ಮತ್ತೋರ್ವ ಆರೋಪಿ ನೀಲಂ ಈ ಹಿಂದೆ ರೈತರ ಪ್ರತಿಭಟನೆ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ.

ಹೀಗಾಗಿ ಈ ಬಗ್ಗೆ ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಟಿಕಾಯತ್ ಅವರು, 'ಇಂದು ಸಂಸತ್ತಿನಲ್ಲಿ ನಡೆದ ಘಟನೆ ಅತ್ಯಂತ ಖಂಡನೀಯ. ಸಂಯುಕ್ತ ಕಿಸಾನ್ ಮೋರ್ಚಾ ಹೆಸರಿನಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಸಂಪೂರ್ಣ ಆಧಾರ ರಹಿತ. SKM ಅಥವಾ BKU ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ