ಲೋಕಸಭಾ ಕಲಾಪ 
ದೇಶ

ಸಂಸತ್ ಕಲಾಪ: ಡರೆಕ್ ಒಬ್ರಿಯಾನ್ ಬೆನ್ನಲ್ಲೇ 5 ಲೋಕಸಭಾ ಸದಸ್ಯರ ಅಮಾನತು

ಲೋಕಸಭೆ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಇದೀಗ ಡರೆಕ್ ಒಬ್ರಿಯಾನ್ ಬೆನ್ನಲ್ಲೇ ಲೋಕಸಭೆಯ 5 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

ನವದೆಹಲಿ: ಲೋಕಸಭೆ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಇದೀಗ ಡರೆಕ್ ಒಬ್ರಿಯಾನ್ ಬೆನ್ನಲ್ಲೇ ಲೋಕಸಭೆಯ 5 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಸ್ಪೀಕರ್ ಹೆಸರಿಸಿದ ನಂತರ ಲೋಕಸಭೆಯು ಐವರು ಕಾಂಗ್ರೆಸ್ ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಗದ್ದಲದ ನಡುವೆಯೇ ಐವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. "ಈ ಸದನವು ಟಿ ಎನ್ ಪ್ರತಾಪನ್, ಹೈಬಿ ಈಡನ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಕಸ್ ಅವರ ದುರ್ವರ್ತನೆ ಮೇರೆಗೆ ಹಾಲಿ ಅಧಿವೇಶನದ ಬಾಕಿ ಕಲಾಪಗಳಿಂದ ಅಮಾನತು ಮಾಡಲಾಗಿದೆ ಎಂದು ನಿರ್ಣಯವನ್ನು ಓದಲಾಯಿತು. ಬಿ ಮಹತಾಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಭದ್ರತಾ ಲೋಪದ ಹಿನ್ನೆಲೆಯಲ್ಲಿ ಅಮಿತ್ ಶಾ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿ ಗದ್ದಲವೇರ್ಪಡಿಸಿದ ನಂತರ ಲೋಕಸಭೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ

ಮಂಡ್ಯ: 1,844 ಅಕ್ರಮ ಇ-ಖಾತಾ ವಿತರಣೆ; ಮೂವರು ಪಿಡಿಒಗಳು ಸೇರಿ ನಾಲ್ವರು ಅಧಿಕಾರಿಗಳ ಅಮಾನತು

SCROLL FOR NEXT